ಚಾಮರಾಜನಗರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರಚಾರ ನಡೆಸುತ್ತಿದ್ದು, ಇದೀಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಸಮಾವೇಶದ ವೇಳೆ ಮಾತನಾಡಿದ ಅವರು, ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಅವರಿಗೆ ಹೊಟ್ಟೆ ಉರಿ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು ಇಡೀ ದೇಶಕ್ಕೆ ಅಚ್ಛೇದನ್ ಬರುತ್ತೇವೆ ಅಂದ್ರು ಅಚ್ಚೆ ದಿನ್ ಬಂತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರದಲ್ಲಿ ಅಧಿಕಾರ ಕೊಟ್ಟರೆ ಕೊಟ್ಟ ಭರವಸೆ ಈಡೇರಿಸುತ್ತೇವೆ.ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ನಾವು ನುಡಿದಂತೆ ನಡೆದಿದ್ದೇವೆ.ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಈ ಬಾರಿ ಉಚಿತವಾಗಿ ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಆದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲಿಲ್ಲ ಬಡವರಿಗೆ ಹಾಕಿ ಕೊಡುವುದಕ್ಕೂ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ ಹಣ ಕೊಡುತ್ತೇವೆ ಕೊಡಿ ಎಂದರು ನಮಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡಲಿಲ್ಲ ಎಂದು ಕಿಡಿ ಕಾರಿದರು.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಎಷ್ಟೇ ಖರ್ಚಾದರೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಬಿಜೆಪಿಯವರು ಸುಳ್ಳು ಹೇಳಿಕೊಂಡೆ ತಿರುಗಾಡುತ್ತಿದ್ದಾರೆ ಎಂದು ಕೊಳ್ಳೇಗಾಲದಲ್ಲಿ ಬಿಜೆಪಿ ವಿರುದ್ಧ ಸೇವಾ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.