ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅಗ್ರಹಿಸಿ ಜೆಡಿಎಸ್ ಬಿಜೆಪಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಇಂದು 5ನೇ ದಿನವಾಗಿದ್ದರಿಂದ ಅವರ ಪಾದಯಾತ್ರೆ ಮಂಡ್ಯ ತಲುಪಿತು. ಈ ವೇಳೆ BSY ವಿರುದ್ಧ ಹೇಳಿಕೆಗೆ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಏನಾದರೂ ಹಾರಾಡಲಿ, ಚೀರಾಡಲಿ, ನಮ್ಮ ಹೋರಾಟವನ್ನು ಹತ್ತಿಕ್ಕಲು ಮಾತ್ರ ಆಗಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರಿಗೆ ದಿನೇ ದಿನೇ ಆತಂಕ ಹೆಚ್ಚಾಗುತ್ತಿದೆ. ಬಿಎಸ್ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವ್ಯಕ್ತಿಗತ ಹೇಳಿಕೆಗೆ ಕಿಡಿ ಕಾರಿದ್ದು ಸಿದ್ದರಾಮಯ್ಯ ಏನಾದರೂ ಹಾರಾಡಲಿ, ಚೀರಾಡಲಿ, ನಮ್ಮ ಹೋರಾಟವನ್ನು ಹತ್ತಿಕ್ಕಲು ಮಾತ್ರ ಆಗಲ್ಲ ಎಂದು ಬಿವೈ ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಜನ ಸ್ವಯಂ ಪ್ರೇರಿತರಾಗಿ ಹೋರಾಟಕ್ಕೆ ಧುಮುಕಿದ್ದಾರೆ. ಹಾಗಾಗಿ ಹತಾಶರಾಗಿ ಸಿಎಂ ಡಿಸಿಎಂ ನಮ್ಮನ್ನು ನಿಂದಿಸುತ್ತಿದ್ದಾರೆ ಹಿಂದೆಯೂ ಮಾಡಿದ್ದಾರೆ, ಈಗಲೂ ಮಾಡುತ್ತಿದ್ದಾರೆ. ನಾವು ಅದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಹೋರಾಟದ ಬಿಸಿ ತಟ್ಟಿದ್ದರಿಂದ ಹೀಗಾಡುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏನು ಮಾಡಬೇಕೆಂಬುದೇ ತೋಚುತ್ತಿಲ್ಲ ಎಂದರು.