ಶಿವಮೊಗ್ಗ : ಶಿವಮೊಗ್ಗದಲ್ಲಿ ಈ ಬಾರಿ ಗೀತಾ ಶಿವರಾಜ್ ಕುಮಾರ ಗೆಲುವು ಗ್ಯಾರಂಟಿ. ಆದರೆ ರಾಜ್ಯದಲ್ಲಿ ಯಾವ ಮೋದಿ ಆಟವೂ ನಡೆಯೊಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ಪರ ಮತಯಾಚನೆ ವೇಳೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಯಾವತ್ತೂ ಇಷ್ಟೊಂದು ಒಗ್ಗಟ್ಟು ಕಂಡಿರಲಿಲ್ಲ. ಈ ಬಾರಿ ಕಾರ್ಯಕರ್ತರು ಕಮಿಟ್ಮೆಂಟ್ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ ಆದ ಮೇಲೆ ಕೆಲಸಗಳು ಚೆನ್ನಾಗಿ ನಡೆಯುತ್ತಿವೆ. ಮತದಾರರು ಕೂಡ ಈ ಬಾರಿ ಬದಲಾವಣೆ ಮಾಡಬೇಕು ಅಂದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸಂಘಟನೆ ಕೊರತೆ ಇತ್ತು. ಈಗ ಬಹಳ ಚೆನ್ನಾಗಿ ಸಂಘಟನೆ ಆಗಿದೆ ಎಂದರು.ಈ ಬಾರಿ ಗೀತಾ ಶಿವರಾಜ್ ಕುಮಾರ್ ಅವರನ್ನ ಮತದಾರರು ಗೆದ್ದೇ ಗೆಲ್ಲಿಸುತ್ತಾರೆ. ಯಾವ ಮೋದಿಯೂ ಏನೂ ಮಾಡಲು ಆಗಲ್ಲ. ಈ ಬಾರಿ ಗೀತಾ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.