ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಕನ್ನಡ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದ್ದು, ಈ ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಘಟನೆ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದು ಶಾಂತಿಯುತವಾಗಿ ಪರಿಹಾರ ಮಾಡುತ್ತಿದ್ದಾರೆ ಹಾಗಾಗಿ ಪ್ರತಿಭಟನೆ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತುಕತೆ ನಡೆಸುತ್ತಿದ್ದಾರೆ.ಶಾಂತಿಯುತ ಪರಿಹಾರ ಮಾಡುತ್ತಿದ್ದಾರೆ ಎಲ್ಲವೂ ಸರಿ ಹೋಗಲಿದೆ. ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ಹಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದು ನಮ್ಮ ಜವಾಬ್ದಾರಿ ಅಲ್ಲ ಅದು ಪೊಲೀಸರ ಜವಾಬ್ದಾರಿಯಾಗಿದೆ. ಅದು ಪೊಲೀಸ್ ಅಧಿಕಾರಿ ಮಾಡಿದ ತಪ್ಪು ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ಹಾಕಿದ್ದಕ್ಕೆ ಇದು ದೊಡ್ಡದಾಗಿದೆ ಎಂದರು
ಈಗಾಗಲೇ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿದೆ ಪೊಲೀಸ್ ಅಧಿಕಾರಿ ತಮ್ಮ ಮೇಲಾಧಿಕಾರಿಗಳ ಮಾತು ಕೇಳಬೇಕಿತ್ತು ಸದ್ಯಯಲೂ ಶಾಂತವಾಗಿದೆ. ಮತ್ತೆ ಕದಡಿಸುವುದು ಬೇಡ. ಬಂದ್ ಗೆ ಕರೆ ನೀಡಿದರೆ ಬೆಳಗಾವಿ ನಗರಕ್ಕೆ ತೊಂದರೆ ಆಗುತ್ತದೆ. ಪ್ರತಿಭಟನೆ ಮಾಡುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಜೊತೆಗೆ ಡಿಕೆ ಶಿವಕುಮಾರ್ ಚರ್ಚಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪಕ್ಷದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಡಿಮ್ಯಾಂಡ್ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಹೈಕಮಾಂಡ್ ನಾಯಕರ ತೀರ್ಮಾನಕ್ಕೆ ನಾವು ಒಪ್ಪಬೇಕಾಗುತ್ತದೆ.ಆದರೆ ಹೈಕಮಾಂಡ್ ಅವರ ತೀರ್ಮಾನ ಎಲ್ಲರೂ ಒಪ್ಪ ಬೇಕಲ್ವಾ? ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.