ನವದೆಹಲಿ: ಪ್ರಧಾನಿ ಮೋದಿ (Narendra Modi ) ಸರ್ಕಾರ ಅಧಿಕಾರದಲ್ಲಿ ಇರುವವರೆಗೆ ಯಾರೂ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಹೇಳಿದ್ದಾರೆ.
ಸಂಸತ್ ಭವನದ ಹೊರಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ (Amit Shah), ರಾಜೀವ್ ಗಾಂಧಿ ಫೌಂಡೇಶನ್ನ ಎಫ್ಸಿಆರ್ಎ [ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ] ರದ್ದತಿ ಕುರಿತು ಪ್ರಶ್ನೆಗಳನ್ನು ತಪ್ಪಿಸಲು ಸಂಸತ್ತಿನಲ್ಲಿ ಕಾಂಗ್ರೆಸ್ ಗಡಿ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ.
ರಾಜೀವ್ ಗಾಂಧಿ ಫೌಂಡೇಶನ್ (ಆರ್ಜಿಎಫ್), ಚೀನಾ ರಾಯಭಾರ ಕಚೇರಿಯಿಂದ ಸುಮಾರು 1.35 ಕೋಟಿ ಪಡೆದಿದೆ ಎಂದು ಅವರು, ಇದು ಎಫ್ಸಿಆರ್ಎ ನಿಯಮಗಳಿಗೆ ಅನುಸಾರವಾಗಿಲ್ಲದ ಕಾರಣ ಅದರ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ನೆಹರೂ ಅವರ ಚೀನಾದ ಮೇಲಿನ ಪ್ರೀತಿಯಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸ್ಥಾನವನ್ನು ತ್ಯಾಗ ಮಾಡಲಾಗಿದೆ ಎಂದು ಶಾ ಹೇಳಿದರು.
ಇದೇ ವೇಳೆ ಭಾರತೀಯ ಸೈನಿಕರ ಶೌರ್ಯವನ್ನು ಶ್ಲಾಘಿಸಿದ ಅವರು, ನಾನು ಸ್ಪಷ್ಟವಾಗಿ ಹೇಳಬಯಸುತ್ತೇನೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪುನರ್ ಉಚ್ಚರಿಸಿದರು.
SHOCKING : ಪತ್ನಿ , ನಾಲ್ಕು ಮಕ್ಕಳನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಕಿರಾತಕ
BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿದ `NCP’ ಶಾಸಕ ರೋಹಿತ್ ಪವಾರ್