ಮಂಗಳೂರು: ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಆಗುವುದಿಲ್ಲ ಎಂಬುದಾಗಿ ಡಿಕೆಶಿ ಸಮ್ಮುಖದಲ್ಲೇ ಮಾಜಿ ಸಿಎಂ ವೀರಪ್ಪ ಮೋಯ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯವಾಗಿದೆ. ಡಿಕೆ ಶಿವಕುಮಾರ್ ಅವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ಹೇಳಿಕೆ ಬರಬಹುದು. ಹೋಗಬಹುದು ಎಂದರು.
ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು ವೈಯಕ್ತಿಕ ತೃಪ್ತಿಗೆ ಮಾಡುತ್ತಾರೆ ಅಷ್ಟೇ ಎಂದರು.
ಸಿಎಂ ಹುದ್ದೆ ವರವಲ್ಲ. ಅದು ಡಿಕೆ ಶಿವಕುಮಾರ್ ಸಂಪಾದನೆ ಮಾಡಿರುವಂತ ಶಕ್ತಿಯಾಗಿದೆ. ಅದನ್ನು ಡಿ.ಕೆ ಶಿವಕುಮಾರ್ ಸಂಪಾದನೆ ಮಾಡಿದ್ದಾರೆ ಎಂಬುದಾಗಿ ತಿಳಿಸಿದರು.
BREAKING: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
‘ಸಾಗರ ಗ್ರಾಮಾಂತರ ಠಾಣೆ’ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯಲ್ಲೇ ‘ಸರಗಳ್ಳ ಅರೆಸ್ಟ್’