ಬೆಂಗಳೂರು: ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರ ಹೊರತಾಗಿ ನನ್ನನ್ನು ಯಾರು ಹನಿಟ್ರ್ಯಾಪ್ ಮಾಡಿಲ್ಲ ಅಂತ ಶಾಸಕ ಹರೀಶ್ ಗೌಡ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹನಿಟ್ರ್ಯಾಪ್ ಪ್ರಕರಣ ನನಗೆ ಮಾಡಿಲ್ಲ. ನನ್ನ ಪರಿಚಿತರಿಗೆ ಮಾಡಿದ್ದರಿಂದ ದೂರು ನೀಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದಂತ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು.

ಸಿಸಿಬಿ ಪೊಲೀಸರು ಹನಿಟ್ರ್ಯಾಪ್, ಬ್ಲಾಕ್ ಮೇಲ್ ಸಂಬಂಧ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಈ ಜಾಲದ ಹಿಂದೆ ಯಾರಿದ್ದಾರೆ ಅನ್ನೋದನ್ನು ನೋಡಬೇಕು. ನನಗೆ ಯಾವುದೇ ಬ್ಲಾಕ್ ಮೇಲ್, ಹನಿಟ್ರ್ಯಾಪ್ ಮಾಡಿಲ್ಲ. ನನ್ನ ಕ್ಷೇತ್ರದ ಕೆಲವರಿಗೆ ಮಾಡಿದ್ದರು ಎಂಬುದಾಗಿ ತಿಳಿಸಿದರು.

ಅಂದಹಾಗೇ ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪೊಲೀಸರು ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎಂಬುವರನ್ನು ಬಂಧಿಸಿದ್ದಾರೆ.

ಯಾವುದೇ ಕಾರಣಕ್ಕೆ ‘ಗ್ಯಾರಂಟಿ’ ಯೋಜನೆಗಳನ್ನು ನಿಲ್ಲಿಸುವುದಿಲ್ಲ : MLC ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ

Share.
Exit mobile version