ಬೆಳಗಾವಿ: ಗುಜರಾತ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ನಡುವೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.
BIGG NEWS: ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಬೆಳಗಾವಿಯ ಬಿಎಸ್ ಎಫ್ ಯೋಧ ನಿಧನ
ಸದ್ಯ ಈ ವಿಚಾರವಾಗಿ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ನೀಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಮೂರ್ನಾಲ್ಕು ತಿಂಗಳಲ್ಲಿ ಏನು ಅಭಿವೃದ್ಧಿ ಮಾಡಲು ಆಗುತ್ತೆ? ಹೊಸ ಸರ್ಕಾರದಲ್ಲಿ ಮಂತ್ರಿ ಆಗಬೇಕೆಂದು ಎಲ್ಲರೂ ಸುಮ್ಮನಿದ್ದಾರೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಗುಜರಾತ್ ಮಾದರಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ಮಾದರಿಯಲ್ಲೇ ಹೊಸಬರಿಗೆ ಅವಕಾಶ ನೀಡಬೇಕು. ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡ್ತಾರೆ ಎಂದರು.