ಬೆಂಗಳೂರು: ರಾಜ್ಯದಲ್ಲಿ ಬುಧವಾರ 28 ಮಂದಿಗೆ ಕೊರೋನಾ ಪಾಸಿಟಿವ್ ಅಂತ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 20 ಮಂದಿ ಗುಣಮುಖರಾಗಿದ್ದಾರೆ. ಆದರೇ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಸಾವನ್ನಪ್ಪಿಲ್ಲ ಎಂಬುದಾಗಿ ಆರೋಗ್ಯ ಇಲಾಖೆಯ ಆಡಿಟ್ ರಿಪೋರ್ಟ್ ನಲ್ಲಿ ತಿಳಿಸಲಾಗಿದೆ.
ಬುಧವಾರ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿರುವಂತ ಆರೋಗ್ಯ ಇಲಾಖೆಯು ಕಳೆದ 24 ಗಂಟೆಯಲ್ಲಿ 619 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 28 ಮಂದಿಗೆ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದ್ದಾಗಿ ಹೇಳಿದೆ.
ಬುಧವಾರ 28 ಮಂದಿಗೆ ಕೊರೋನಾ ಸೋಂಕು ದೃಢಪಟ್ಟ ಕಾರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 467ಕ್ಕೆ ಏರಿಕೆಯಾಗಿದೆ. 463 ಮಂದಿ ಹೋಂ ಐಸೋಲೇಷನ್ ನಲ್ಲಿದ್ದರೇ, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
ಇನ್ನೂ ಕೊರೋನಾ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ ಎನ್ನಲಾದಂತ 11 ಮಂದಿಯು ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ಈ ಬಗ್ಗೆ ಕೋವಿಡ್-19 ರಾಜ್ಯ ಮಟ್ಟದ ಡೆತ್ ಆಡಿಟ್ ನಡೆಸಿ ಖಚಿತ ವರದಿಯನ್ನು ಪಡೆಯಲಾಗಿದೆ. ಈ ಎಲ್ಲಾ ರೋಗಿಗಳು ವಿವಿಧ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ.
Daily report of Covid 19 as on 11-06-2025
ಕೋವಿಡ್ 19 – ದಿನದ ವರದಿ@CMofKarnataka @KarnatakaVarthe pic.twitter.com/ABm8y1tWm4— Karnataka Health Department (@DHFWKA) June 11, 2025
ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ