ಬೆಂಗಳೂರು: ರಾಜ್ಯದ 440 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 412 ಕಾಲೇಜುಗಳಲ್ಲಿ ಪ್ರಾಂಶುಪಾಲರೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.
ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.2022 ರಲ್ಲಿ ಅರ್ಜಿಗಳನ್ನು ಆಹ್ವಾನಿಸಿದಾಗ, 2023 ರಲ್ಲಿ ಪರೀಕ್ಷೆ ನಡೆಸಿದಾಗ ಮತ್ತು ನಂತರ ಮೆರಿಟ್ ಪಟ್ಟಿಯನ್ನು ಸಹ ಘೋಷಿಸಿದಾಗ ಪ್ರಾಂಶುಪಾಲರ ನೇಮಕಾತಿಯಲ್ಲಿ ಏಕೆ ವಿಳಂಬವಾಯಿತು ಎಂದು ಯತ್ನಾಳ್ ಪ್ರಶ್ನಿಸಿದರು.
ಕೆಇಎ ಈಗಾಗಲೇ ಪರೀಕ್ಷೆ ನಡೆಸಿದ್ದು, ಅಂತಿಮ ಮೆರಿಟ್ ಪಟ್ಟಿಯನ್ನು ಸಲ್ಲಿಸುವಂತೆ ಕೆಇಎ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಸುಧಾಕರ್ ಹೇಳಿದರು