ಬೆಳಗಾವಿ : ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಕುರಿತಂತೆ ಯಾವುದೇ ತನಿಖೆಯ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವ ಪರಮೇಶ್ವರ್ ಅವರು, ಪಂಚಮಸಾಲಿ ಹೋರಾಟದ ಕುರಿತಂತೆ ಪ್ರತಿಭಟನಾಕಾರರಿಗೆ ಪ್ರತಿಭಟನೆಗೆ ಜಾಗ ನಿಗದಿಪಡಿಸಲಾಗಿತ್ತು, 10000 ಮಂದಿ ಸೇರಲು ಅವಕಾಶ ನೀಡಲಾಗಿತ್ತು. ಅವರ ಮನವಿ ಆಲಿಸಲು 3 ಮಂದಿ ಸಚಿವರನ್ನು ಕಳುಹಿಸಲಾಗಿತ್ತು. ಆದರೆ ಪ್ರತಿಭಟನೆ ಸ್ಥಳಕ್ಕೆ ಮುಖ್ಯಮಂತ್ರಿಗಳು ಬರಬೇಕೆಂದು ಪಟ್ಟು ಹಿಡಿದು, ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಕಾನೂನು ಸುವ್ಯವಸ್ಥೆ ಕಾಪಾಡಲು ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಈ ಪ್ರಕರಣದಲ್ಲಿ ಕೈಗೊಂಡ ಕ್ರಮ ತೆರೆದ ಪುಸ್ತಕದಂತೆ ಇದ್ದು ಯಾವುದೇ ತನಿಖೆ ನಡೆಸುವ ಅಗತ್ಯವೇ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿದರು.
ಲಾಠಿ ಚಾರ್ಜ್ ಘಟನೆಯನ್ನು ನ್ಯಾಯoಗ ತನಿಖೆಗೆ ಒಳಪಡಿಸುವoತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.