ಬೆಳಗಾವಿ : ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಧಿಸಿರುವ ಶುಲ್ಕವನ್ನು ಹಿಂಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ವಿಧಾನಪರಿಷತ್ ನಲ್ಲಿ ಸ್ಪಷ್ಟಪಡಿಸಿದರು.
ಚಳಿಗಾಳ ಅಧಿವೇಶನದ ಮೊದಲ ದಿನದ ವಿಧಾನ ಪರಿಷತ್ ಕಲಾಪದಲ್ಲಿ ಜೆಡಿಎಸ್ ಪಕ್ಷದ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ಕಡು ಬಡ ರೋಗಿಗಳಿಗೂ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಇರುತ್ತದೆ. ಹೀಗಾಗಿ ಹೆಚ್ಚಳ ಮಾಡಿರುವ ಶುಲ್ಕವನ್ನು ಪರಿಷ್ಕರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಇದರ ವ್ಯಾಪ್ತಿಗೊಳಪಡುವ ಬೌರಿಂಗ್, ವಿಕ್ಟೋರಿಯಾ, ಮಿಂಟೋ, ವಾಣಿವಿಲಾಸ ಮತ್ತು ಪಿಎಂಎಸ್ ಎಸ್ ವೈ ಆಸ್ಪತ್ರೆಗಳಲ್ಲಿ ಆರು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗಿದೆ. ಮೂರು ವರ್ಷಗಳಿಗೊಮ್ಮೆ ದರ ಪರಿಷ್ಕರಣೆ ಮಾಡಬೇಕೆಂಬ ನಿಯಮವಿದೆ. ಈ ಹಿಂದೆ ಕೋವಿಡ್ ಸಾಂಕ್ರಾಮಿಕದಿಂದಾಗಿ ದರಗಳನ್ನು ಪರಿಷ್ಕರಣೆ ಮಾಡಲಾಗಿಲ್ಲ ಎಂದು ಸಚಿವರು ಹೇಳಿದರು.
ಎಎಂಸಿ/ಸಿಎಎಸಿ ಔಷಧ, ರಾಸಾಯನಿಕ ದರಗಳ ಹೆಚ್ಚಳದಿಂದಾಗಿ ಶುಲ್ಕ ಪರಿಷ್ಕರಣೆ ಮಾಡಬೇಕಾದ ಅಗತ್ಯವಿದೆ. ಆಸ್ಪತ್ರೆಗಳ ನಿರ್ವಹಣೆ, ಸಿಬ್ಬಂದಿ ವೇತನ, ಸಂಪನ್ಮೂಲಗಳ ಕ್ರೊಢೀಕರಣ ಅಗತ್ಯವಿದೆ ಎಂದು ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut
‘ಯುವನಿಧಿ ಫಲಾನುಭವಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಕಾಲದಲ್ಲಿ ‘ನಿರುದ್ಯೋಗ ಭತ್ಯೆ’ ಪಾವತಿ