ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತ್ರ, ರಾಜ್ಯ ಬೊಕ್ಕಸ ಖಾಲಿಯಾಗಿದೆ. ಕೆ ಎಸ್ ಆರ್ ಟಿಸಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ನೀಡಿದಂತ ಟಿಕೆಟ್ ದರವನ್ನು ಸರ್ಕಾರ ಈವರೆಗೆ ಪಾವತಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿತ್ತು. ಆದ್ರೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ( KSRTC Bus Ticket Price Hike ) ಮಾಡಲಾಗುತ್ತಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ( Minister Ramalingareddy ) ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು.
ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶ್ರೀನಿವಾಸ್ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ( KSRTC Bus Ticket ) ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು ಅಂತ ಹೇಳಿದ್ದಾರೆ. ಆದ್ರೇ ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಮಾಡಿಲ್ಲ ಅಂತ ತಿಳಿಸಿದರು.
ರಾಜ್ಯ ಸರ್ಕಾರಕ್ಕೆ ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಅಲ್ಲದೇ ಟಿಕೆಟ್ ದರ ಏರಿಸುವಂತ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಅಂತ ಸ್ಪಷ್ಟ ಪಡಿಸಿದರು.
ಶಿವಮೊಗ್ಗ ‘KSRTC ಬಸ್ ನಿಲ್ದಾಣ’ದಲ್ಲಿ ಕಳ್ಳತನ ಮಾಡುತ್ತಿದ್ದ ಭದ್ರಾವತಿಯ ‘ಐವರು ಮಹಿಳೆ’ಯರು ಅರೆಸ್ಟ್