ಮಂಗಳೂರು: ನಗರದ ಪಬ್ ಮೇಲೆ ಬಜರಂಗದಳ ದಾಳಿ ವಿಚಾರವಾಗಿ ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಬಲ್ಮಠದ ಪಬ್ ಮುಂದೆ ನಿನ್ನೆ ರಾತ್ರಿ ಹತ್ತು-ಹನ್ನೆರೆಡು ಮಂದಿ ಜಮಾಯಿಸಿದ್ದರು.
BIGG NEWS: ಗುಜರಾತ್ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ; ಕಳ್ಳರ ಬಂಧನಕ್ಕಾಗಿ SIT ರಚನೆ
ಪಬ್ ಒಳಗೆ ಅಪ್ರಾಪ್ತರು ಮದ್ಯ ಸೇವನೆ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಬೌನ್ಸರ್ ಜೊತೆ ಸಂಘಟನೆಯೊಂದಕ್ಕೆ ಸೇರಿದ ಯುವಕರು ಮಾತನಾಡಿದ್ದರು. ಬೌನ್ಸರ್ ಪಬ್ ಮ್ಯಾನೇಜರ್ ಜೊತೆ ಮಾತನಾಡಿ ಪಬ್ ಒಳಗಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದಾನೆ ಎಂದು ಹೇಳಿದ್ದಾರೆ.
BIGG NEWS: ಗುಜರಾತ್ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ; ಕಳ್ಳರ ಬಂಧನಕ್ಕಾಗಿ SIT ರಚನೆ
ಇಲ್ಲಿ ಯಾವುದೇ ಅಟ್ಯಾಕ್,ದೈಹಿಕ ಹಲ್ಲೆಗಳು ನಡೆದಿಲ್ಲ. ಪಬ್ ಒಳಗೆ ಯಾರೂ ಪ್ರವೇಶ ಮಾಡಿಲ್ಲ. ನಿನ್ನೆ ನಡೆದ ಘಟನೆ ಗೂ ಕಿಸ್ ಪಂದ್ಯ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಆ ಪ್ರಕರಣದಲ್ಲಿ ಭಾಗಿಯಾದವರು ಯಾರೂ ನಿನ್ನೆ ಪಬ್ ನ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ಇನ್ನೂ ಈ ಬಗ್ಗೆ ಯಾರೂ ದೂರು ನೀಡಿಲ್ಲ,ದೂರು ನೀಡಿದರೆ ಪ್ರಕರಣ ದಾಖಲು ಮಾಡುತ್ತೇವೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ