ಬೆಂಗಳೂರು : ಸಿಎಂ ಸ್ಥಾನದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯಲ್ಲಿ ವ್ಯತ್ಯಾಸ ವಿಚಾರಕ್ಕೆ ಸಂಬಂಧಪಟ್ಟಂತೆ ಅದು ನಿಮಗೆ ವ್ಯತ್ಯಾಸ ಕಾಣಬಹುದು ಆದರೆ ನಮಗಲ್ಲ ಸಿಎಂ ಸಾಫ್ಟ್ ಆಗಿದ್ದಾರೆ ಅಂತ ಯಾರು ರೇಟಿಂಗ್ ಮಾಡಿದ್ದು? ಸಾಫ್ಟ್ ಆಗಿದ್ದಾರೊ ಅಥವಾ ಹಾರ್ಡ್ ಆಗಿದ್ದಾರೊ ಅಂತ ಹೇಗೆ ಗೊತ್ತಾಗುತ್ತದೆ? ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, 2028 ರಲ್ಲೂ ಸ್ಪರ್ಧಿಸುವಂತೆ ಒತ್ತಾಯ ಇದೆ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಮುಂದೆಯೂ ಸ್ಪರ್ಧೆ ಮಾಡೋದು ಅವರ ವೈಯಕ್ತಿಕ ತೀರ್ಮಾನ 2028ರಲ್ಲೂ ನೀವು ಸ್ಪರ್ಧಿಸಿ ಸ್ಪರ್ಧಿಸಬೇಡಿ ಅಂತ ಹೇಳೋಕಾಗಲ್ಲ ಅದು ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ವಿಚಾರ ಎಂದು ತಿಳಿಸಿದರು.
ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರಕ್ಕೆ ಸಂಬಂಧಪಟ್ಟಂತೆ ದಲಿತ ಸಿಎಂ ಬಗ್ಗೆ ಅವರವರ ಅಭಿಪ್ರಾಯ ಹೇಳುತ್ತಾರೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಈ ಬಗ್ಗೆ ಪದೇಪದೇ ಹೇಳಿಕೆ ಕೊಡುವುದು ಸರಿಯಲ್ಲ. ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ. ನಿನ್ನೆ ಸಿಎಂ ಸಿದ್ದರಾಮಯ್ಯ ಕೂಡ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದೇ ಅಂತಿಮ.
ಹೈಕಮಾಂಡ್ ತೀರ್ಮಾನವನ್ನು ನಾವೆಲ್ಲರೂ ಒಪ್ಪುತ್ತೇವೆ ಸಿಎಂ ಸ್ಥಾನದ ಪ್ರಶ್ನೆ ಎಲ್ಲೂ ಉದ್ಭವ ಆಗಿಲ್ಲ. ಹೈಕಮಾಂಡ ನಾಯಕರು ಸಹ ನಮಗೆ ಏನೂ ಹೇಳಿಲ್ಲ. ಈ ರೀತಿ ಹೇಳಿಕೆ ಆಡಳಿತದ ಮೇಲೆ ಪರಿಣಾಮ ಬೀರುತ್ತೆ ಸದ್ಯದ ಪರಿಸ್ಥಿತಿಯಲ್ಲಿ ಅಂತಹ ಪ್ರಶ್ನೆ ಇಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.








