Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘HMT’ ಅಧೀನದಲ್ಲಿರುವ ಭೂಮಿ ರಾಜ್ಯ ಸರ್ಕಾರಕ್ಕೆ ವಾಪಾಸ್ ಕೊಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ‘HDK’ ಸ್ಪಷ್ಟನೆ
KARNATAKA

‘HMT’ ಅಧೀನದಲ್ಲಿರುವ ಭೂಮಿ ರಾಜ್ಯ ಸರ್ಕಾರಕ್ಕೆ ವಾಪಾಸ್ ಕೊಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ‘HDK’ ಸ್ಪಷ್ಟನೆ

By kannadanewsnow0913/08/2024 4:35 PM

ಬೆಂಗಳೂರು: ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್‌ಎಂಟಿ ಕಾರ್ಖಾನೆಯ ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಲ್ಲಿ ಹೇಳಿದರು.

ಒಂದು ವೇಳೆ ರಾಜ್ಯ ಸರಕಾರ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಬೆಂಗಳೂರಿನ ಹೆಚ್‌ಎಂಟಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಸಚಿವರು.

ಹೆಚ್‌ಎಂಟಿಗೆ ಜಮೀನನ್ನು ಪುಕ್ಕಟೆ ಕೊಟ್ಟಿಲ್ಲ

ಅರಣ್ಯ ಇಲಾಖೆ ಭೂಮಿಯನ್ನು ಅಕ್ರಮವಾಗಿ ವಿವಿಧ ಸರ್ಕಾರಿ ಸಂಸ್ಥೆ, ಇಲಾಖೆಗಳಿಗೆ ಮತ್ತು ಖಾಸಗಿಯವರಿಗೆ ಸಂಸ್ಥೆ ಮಾರಾಟ ಮಾಡಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿರುವ ಹೇಳಿಕೆಯನ್ನು ಸಚಿವರು ಸಾರಾಸಗಟಾಗಿ ತಳ್ಳಿಹಾಕಿದರು.

ಮೈಸೂರು ಮಹಾರಾಜರ ಕಾಲದಲ್ಲಿ ಜಗತ್ಪ್ರಸಿದ್ಧ ಎಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ಸ್ಥಾಪನೆಯಾದ ಹೆಚ್‌ಎಂಟಿ ಕಾರ್ಖಾನೆಗೆ ಯಾವುದೇ ಜಮೀನನ್ನು ಉಚಿತವಾಗಿ, ಪುಕ್ಕಟೆಯಾಗಿ ನೀಡಿಲ್ಲ. ಬೇಕಿದ್ದರೆ ರಾಜ್ಯ ಅರಣ್ಯ ಸಚಿವರು ದಾಖಲೆಗಳನ್ನು ತೆಗೆದು ನೋಡಲಿ ಎಂದು ಸಲಹೆ ಮಾಡಿದರು ಕುಮಾರಸ್ವಾಮಿ ಅವರು.

ಜಮೀನು ವಾಪಸ್ ಪಡೆದು ಯಾವ ಬಿಲ್ಡರ್ ಗೆ ಧಾರೆ ಎರೆಯುತ್ತೀರಿ?

ಕಾರ್ಖಾನೆಯ ವಶದಲ್ಲಿರುವ ಜಮೀನು ತೆಗೆದುಕೊಂಡು ಏನು ಮಾಡುತ್ತೀರಿ ಸಚಿವರೇ? ಯಾವ ಬಿಲ್ಡರ್ ಗೆ ದಾನ ಮಾಡುತ್ತೀರಿ? ಹಿಂದೆ ಬೆಂಗಳೂರು ನಗರವನ್ನು ಸಿಂಗಾಪುರ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ನಿಮ್ಮ ಪಕ್ಷದ ನಾಯಕರು ಮಾಡಿದ್ದೇನು ಎಂಬುದನ್ನು ಸ್ವಲ್ಪ ತಿಳಿದುಕೊಂಡು ಮಾತನಾಡಿ ಎಂದು ಟಾಂಗ್ ಕೊಟ್ಟರು ಕೇಂದ್ರ ಸಚಿವರು.

ಒಂದು ಕಡೆ ರಾಜ್ಯಕ್ಕೆ ಕೇಂದ್ರ ಸರಕಾರ ಸಹಕಾರ ನೀಡುತ್ತಿಲ್ಲ ಎಂದು ಆರೋಪ ಮಾಡುತ್ತೀರಿ. ಇನ್ನೊಂದು ಕಡೆ ರಾಜ್ಯಕ್ಕೆ ಒಳ್ಳೆಯದು ಮಾಡಲು ಬರುವ ಕೇಂದ್ರ ಸಚಿವರಿಗೆ ಅಡ್ಡಿ ಮಾಡುತ್ತೀರಿ. ಜನತೆಯ ಆಶೀರ್ವಾದ ಹಾಗೂ ಭಗವಂತನ ಕೃಪೆಯಿಂದ ನಾನು ಕೇಂದ್ರದ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವನಾಗಿದ್ದೇನೆ. ಸಿಕ್ಕಿರುವ ಕಾಲಾವಕಾಶದಲ್ಲಿ ರಾಜ್ಯಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ಎನ್ನುವುದು ನನ್ನ ಕಳಕಳಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೇಂದ್ರ ಸರಕಾರಕ್ಕೆ ಸಹಕಾರ ಕೊಡಿ

ನನಗೆ ಅಸಹಕಾರ ಕೊಟ್ಟರೆ ನಿಮಗೆ ಸಿಗುವ ಲಾಭ ಏನು? ಇಲ್ಲಿ ಕುಮಾರಸ್ವಾಮಿ ಮುಖ್ಯವಲ್ಲ. ರಾಜ್ಯಕ್ಕೆ ಒಳ್ಳೆಯದು ಆಗಬೇಕು. ಅದಕ್ಕಾಗಿ ನನಗೆ, ಕೇಂದ್ರ ಸರಕಾರಕ್ಕೆ ಸಹಕಾರ ಕೊಡಿ. ಇನ್ನಾದರೂ ಲೂಟಿ ಹೊಡೆಯುವುದು ನಿಲ್ಲಿಸಿ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಿ. ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಯನ್ನು ಪತ್ರಿಕೆಯಲ್ಲಿ ಓದಿ ನನ್ನ ಕಣ್ಣಲ್ಲಿ ನೀರು ಬಂತು. ಹೆಚ್‌ಎಂಟಿ ಯಂತಹ ಕಾರ್ಖಾನೆಗಳನ್ನು ಕಳೆದುಕೊಂಡು ಏನು ಸಾಧನೆ ಮಾಡುತ್ತೀರಿ? ಎಂದು ಕೇಂದ್ರ ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಅರಣ್ಯ ಭೂಮಿಯನ್ನು ವಾಪಸ್ಸು ಪಡೆಯುವ ರಾಜ್ಯ ಅರಣ್ಯ ಸಚಿವರ ಹೇಳಿಕೆಯ ಬಗ್ಗೆ ಅತೀವ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವರು; ಯಾವ ಆಧಾರದ ಮೇಲೆ ಮರಳಿ ಅರಣ್ಯ ಇಲಾಖೆ ವಶಕ್ಕೆ ಭೂಮಿಯನ್ನು ಪಡೆಯುತ್ತೀರಿ? ಇದರ ಒಳ ಉದ್ದೇಶ ಏನು? ನಿಮಗೆ ಈ ಭೂಮಿಗಳ ದಾಖಲೆಗಳು, ಈ ಕಾರ್ಖಾನೆಯ ಸ್ಥಾಪನೆಯ ಇತಿಹಾಸ ಗೊತ್ತಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕೇಂದ್ರ ಸಚಿವರು.

ಯಾವ ಕಾರಣಕ್ಕೂ ಹೆಚ್‍ಎಂಟಿಗೆ ಸೇರಿದ ಜಮೀನನ್ನು ವಾಪಸ್ಸು ಕೊಡುವ ಪ್ರಶ್ನೆಯೇ ಇಲ್ಲ. ಅದು ಖರೀದಿ ಮಾಡಿರುವ ಜಮೀನಾಗಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಅಂತಹ ನಡೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಹೆಚ್‍ಎಂಟಿಗೆ 599 ಎಕರೆ ಜಮೀನನ್ನು ಉಚಿತವಾಗಿ ಕೊಟ್ಟಿಲ್ಲ. ಜಮೀನು ಹಸ್ತಾಂತರಕ್ಕೆ ಸಂಬಂಧಿಸಿದ ಕಡತವನ್ನು ಅರಣ್ಯ ಸಚಿವರು ಪರಿಶೀಲಿಸುವುದು ಒಳ್ಳೆಯದು ಎಂದ ಕೇಂದ್ರ ಸಚಿವರು; ರಾಜ್ಯ ಸರಕಾರ ಇದೇ ರೀತಿ ಕಂಪನಿಗೆ ಕಿರುಕುಳ ನೀಡಿದರೆ, ನಾವು ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ಕೊಟ್ಟರು.

1963ರಲ್ಲಿ 185 ಎಕರೆಗೆ 4.40 ಲಕ್ಷ ರೂ. ಹಾಗೂ 77 ಎಕರೆಗೆ 1.80 ಲಕ್ಷ ರೂ. 1965ರಲ್ಲಿ ಪಾವತಿಸಲಾಗಿದೆ. ಮೂರನೇ ಬಾರಿಗೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರಕಾರ ಅಧಿಕಾರಕ್ಕೆ ಬಂದ ಮೇಲೆ ನಾನು ಭಾರೀ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡೆ. ಬೆಂಗಳೂರು, ಹೈದರಾಬಾದ್, ಹರಿಯಾಣದ ಪಿಂಜಾರೋದಲ್ಲಿರುವ ಘಟಕಗಳಿಗೆ ಭೇಟಿ ನೀಡಿದ್ದೆ. ಹೆಚ್‍ಎಂಟಿಗೆ ಕಾಯಕಲ್ಪ ನೀಡುವುದಾಗಿ ಪ್ರಕಟಿಸಿದ ಬೆನ್ನಲ್ಲೇ ಅದರ ಷೇರು ಮೌಲ್ಯ ₹45 ಇದ್ದದ್ದು ₹95ಕ್ಕೆ ಏರಿಕೆಯಾಯಿತು. ನಾನು ಒಂದು ಸಂಸ್ಥೆಗೆ ಕಾಯಕಲ್ಪ ನೀಡಲು ಪ್ರಯತ್ನಿಸುತ್ತಿದ್ದರೆ,ರಾಜ್ಯ ಸರಕಾರದಿಂದ ಅಸಹಕಾರ ಹಾಗೂ ಗೊಂದಲ ಮೂಡಿಸುವ ಕೆಲಸವಾಗುತ್ತಿದೆ ಎಂಡಿ ಕಿಡಿಕಾರಿದರು.

2020ರಲ್ಲಿ ಡಿ ನೋಟಿಫಿಕೇಷನ್‍ಗಾಗಿ ಸರಕಾರದಿಂದ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ. ಅದರ ಬಗ್ಗೆ ಈಗ ಅನುಮಾನ ಶುರುವಾಗಿದೆ ಎಂದ ಸಚಿವರು; ಹೆಚ್‍ಎಂಟಿ ಕಾರ್ಖಾನೆಯನ್ನು ಉಳಿಸುವ ಉದ್ದೇಶದಿಂದ ಪರಿಣಿತರ ಸಮಿತಿ ರಚನೆಗೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರಕಾರ 2016ರಲ್ಲೇ ನಷ್ಟದ ಉದ್ಯಮವೆಂದು ಮುಚ್ಚಲು ತೀರ್ಮಾನಿಸಿತ್ತು. ಆದರೆ ಪ್ರಧಾನಿಗಳು, ಹಣಕಾಸು ಸಚಿವರು ಹಾಗೂ ಬಂಡವಾಳ ವಾಪಸಾತಿ ಇಲಾಖೆಯ ಮನವೊಲಿಸಿ ಈ ಹೆಮ್ಮೆಯ ಕಾರ್ಖಾನೆಗೆ ಕಾಯಕಲ್ಪ ನೀಡುವ ಗುರಿ ನನ್ನದು. ಈ ಪ್ರಯತ್ನಕ್ಕೆ ರಾಜ್ಯ ಸರಕಾರ ಪ್ರಾಂಜಲ ಮನಸ್ಸಿನಿಂದ ಸಹಕಾರ ನೋಡಬೇಕು ಎಂದು ಕುಮಾರಸ್ವಾಮಿ ಅವರು ಕೋರಿದರು.

1999-2004 ರವರೆಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದವರು ಯಾರು?

ಹಿಂದೆ ಹೆಚ್‍ಎಂಟಿಗೆ ಸೇರಿದ 200 ಎಕರೆ ಜಮೀನನ್ನು ಮಾರಾಟ ಮಾಡಲು ಅನುಮತಿ ಕೊಟ್ಟರು ಯಾರು? 1999ರಿಂದ 2004 ರವರೆಗೆ ರಾಜ್ಯದಲ್ಲಿ ಯಾರು ಅಧಿಕಾರದಲ್ಲಿದ್ದರು? 2006ರಲ್ಲಿ ನಾನು ಮುಖ್ಯಮಂತ್ರಿಯಾದಾಗ ಹೆಚ್‍ಎಂಟಿಯ ಒಂದು ಅಂಗುಲ ಜಮೀನು ಮಾರಾಟ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಆದೇಶ ಮಾಡಿದ್ದೆ. ಅದಕ್ಕೆ ಭೂಮಿ ಉಳಿದುಕೊಂಡಿದೆ. ಆದರೆ, ಆಡಳಿತ ನಡೆಸಿದ ಸರಕಾರಗಳಲ್ಲಿ ಬಿಲ್ಡರ್ ಕೆಲಸ ಮಾಡುತ್ತಿದ್ದ ಕೆಲವರಿಗೆ ಈ ಕಾರ್ಖಾನೆಯ ಜಮೀನು ಮೇಲೆ ವಕ್ರದೃಷ್ಟಿ ಬಿದ್ದಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರೆಸ್ಟೀಜ್ ಕಂಪನಿಯವರು 27 ಎಕರೆ ಭೂಮಿ ಖರೀದಿ ಮಾಡಿದ್ದು ಯಾವಾಗ? ಈಗಾಗಲೇ ಅಪಾರ್ಟ್ಮೆಂಟ್ ಗಳನ್ನು ಕಟ್ತಾ ಇದಾರಲ್ಲಾ? ಅದೇನೋ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟಿದ್ದಾರಲ್ಲಾ? ಪ್ರೆಸ್ಟೀಜ್ ಗೆ ಭೂಮಿ ಖರೀದಿ ಎನ್ ಓಸಿ ಕೊಡುತ್ತಾರೆ. ಆದರೆ, ನಮ್ಮ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಖರೀದಿ ಮಾಡಲು ಬಂದರೆ ಎನ್ ಓಸಿ ಕೊಡುವುದಿಲ್ಲ. ರಾಜ್ಯ ಸರಕಾರಕ್ಕೆ ಪ್ರೆಸ್ಟೀಜ್ ಮುಖ್ಯವಾ? ಅಥವಾ ಇಸ್ರೋ ಮುಖ್ಯವಾ? ಹೇಳಬೇಕಲ್ಲವೇ? ಎಂದು ಟಾಂಗ್ ಕೊಟ್ಟರು ಕೇಂದ್ರ ಸಚಿವರು.

ಕಾಡುಗೋಡಿ ಪ್ಲಾಂಟೇಷನ್ 711 ಎಕರೆ ಇದೆ. ಅದನ್ನು ಕಾನ್ ಕಾರ್ಡ್ ಪ್ರೈ ಲಿ. ಖರೀದಿ ಮಾಡಿದೆ. ಈಗ ಆ ಭೂಮಿಯಲ್ಲಿ ರಾಜ್ಯ ಸರಕಾರ ನಿವೇಶನಗಳನ್ನು ಮಾಡಿ ಹಂಚಲು ಹೊರಟಿದೆ. ಆಗ ಅದು ಅರಣ್ಯ ಭೂಮಿ, ಅದನ್ನು ವಶಪಡಿಸಿಕೊಳ್ಳಬೇಕು ಅನಿಸಲಿಲ್ಲವಾ‌? ಖಂಡ್ರೆ ಅವರೇ… ಕುಮಾರಸ್ವಾಮಿ ಮೇಲಿನ ದ್ವೇಷಕ್ಕೆ ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ. ನೀವು ಲೂಟಿ ಮಾಡಿದ್ದು ಸಾಕು. ಕುಮಾರಸ್ವಾಮಿ ಮಾಡ್ತಿರುವ ಕೆಲಸಕ್ಕೆ ಸಹಕಾರ ಕೊಡಿ ಎಂದು ಅವರು ಒತ್ತಾಯ ಮಾಡಿದರು.

ಹೆಚ್‍ಎಂಟಿ ಕಾರ್ಖಾನೆಯಲ್ಲಿ 15ರಿಂದ 20 ಸಾವಿರ ಜನ ಕೆಲಸ ಮಾಡುತ್ತಿದ್ದರು. ಗಡಿಯಾರ ಹಾಗೂ ಟ್ರ್ಯಾಕ್ಟರ್ ಘಟಕವೊಂದಿತ್ತು. 1970ರಲ್ಲಿ ₹270 ಕೋಟಿ ಲಾಭ ಗಳಿಸಿತ್ತು. ಆ ಹಣದಿಂದ ಹೈದರಾಬಾದ್, ಉತ್ತರಕಾಂಡ, ಕೇರಳ, ಅಜ್ಮೀರ್ ಮೊದಲಾದೆಡೆ ಶಾಖೆಗಳು ಪ್ರಾರಂಭವಾದವು. ಇವೆಲ್ಲಾ ದೇಶಕ್ಕೆ ದೊಡ್ಡ ಕೊಡುಗೆ ಕೊಟ್ಟಿವೆ ಎಂದರು ಹೇಳಿದರು.

ಕುದುರೆಮುಖ ಕಂಪನಿ ಯೋಜನೆಗೂ ಅಡ್ಡಿ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಕಾಯಕಲ್ಪ ನೀಡಲು ದೇವದಾರಿ ಗಣಿಗಾರಿಕೆ ಯೋಜನೆಗೆ ಆರ್ಥಿಕ ನೆರವು ನೀಡುವ ಕಡತಕ್ಕೆ ಸಹಿ ಹಾಕಿದೆ. ಆ ಕಡತವನ್ನು ಹಣಕಾಸು ಇಲಾಖೆಗೆ ಕಲಿಸುವುದಕ್ಕೆ ಮಾತ್ರ ನಾನು ಒಪ್ಪಿಗೆ ಕೊಟ್ಟೆ. ಆದರೆ, ಕುಮಾರಸ್ವಾಮಿ ಗಣಿಗಾರಿಕೆ ಯೋಜನೆಗೆ ಒಪ್ಪಿಗೆ ಕೊಟ್ಟು ಅರಣ್ಯ ನಾಶಕ್ಕೆ ಕಾರಣ ಆಗುತ್ತಿದ್ದಾರೆ ಎಂದು ರಾಜ್ಯ ಮತ್ತು ಇನ್ನೂ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸಿದರು.

ಈ ಬಗ್ಗೆ ರಾಜ್ಯ ಸರಕಾರದಿಂದಲೇ ಗೊಂದಲ ಮೂಡಿಸುವ ಪ್ರಯತ್ನ ನಡೆಯಿತು. ₹1,738 ಕೋಟಿಗೆ ಆರ್ಥಿಕ ಗ್ಯಾರಂಟಿ ಕೊಡುವ ಕಡತಕ್ಕೆ ನಾನು ಸಹಿ ಹಾಕಿದ್ದು. ಕುದುರೆಮುಖ ಕಂಪನಿಯಲ್ಲಿ ಸಾವಿರಾರು ಉದ್ಯೋಗಿಗಳಿದ್ದು, ತೊಂದರೆಗೆ ಸಿಲುಕಲಿದ್ದಾರೆ. ಹಾಗಾದರೆ, ರಾಜ್ಯ ಅಭಿವೃದ್ಧಿ ಆಗುವುದು ಹೇಗೆ? ರಾಜ್ಯ ಸರಕಾರವೇ ಅಡ್ಡಿ ಉಂಟು ಮಾಡಿದರೆ ಹೇಗೆ? ಇದು ಯಾವ ರೀತಿಯ ನಡೆ ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಬಳ್ಳಾರಿಯ ಸಂಡೂರಿನಲ್ಲಿ ಗಣಿಗಾರಿಕೆ ನಡೆಸಲು ಸಿದ್ದರಾಮಯ್ಯನವರೇ ಸಿಎಂ ಆಗಿದ್ದ ವೇಳೆಯೇ ದೇವದಾರಿ ಗಣಿಗಾರಿಕೆ ಯೋಜನೆಗೆ ಒಪ್ಪಿಗೆ ನೀಡಿದ್ದರು. ಅವರೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಅದಕ್ಕೆ ಕೇಂದ್ರದ ಪರಿಸರ ಇಲಾಖೆಯ ಅನುಮತಿಯೂ ಸಿಕ್ಕಿದೆ. ಇದೆಲ್ಲ ಆದ ಮೇಲೆಯೇ ನಾನು ನಾನು ಹಣಕಾಸು ಗ್ಯಾರಂಟಿ ಕಡತಕ್ಕೆ ಸಹಿ ಹಾಕಿದೆ.

ಅರಣ್ಯೀಕರಣಕ್ಕೆ ₹190 ಕೋಟಿ ಹಾಗೂ ₹500 ಕೋಟಿಗಳನ್ನು ರಾಜ್ಯ ಸರಕಾರಕ್ಕೆ ಕುದುರೆಮುಖ ಕಂಪನಿ ಪಾವತಿಸಿದೆ. ಅನುಮತಿ ಕೊಡಲು ಆಗದಿದ್ದರೆ ಸರಕಾರ ಹಣ ಕಟ್ಟಿಸಿಕೊಂಡಿದ್ದು ಯಾಕೆ? ಅನುಮತಿ ಕೊಟ್ಟಿದ್ದೂ ಅವರೇ, ಈಗ ಗೊಂದಲ ಮೂಡಿಸುತ್ತಿರುವುದು ಕೂಡ ಅವರೇ. ಇದು ರಾಜ್ಯ ಸರಕಾರದ ಇಬ್ಬಗೆಯ ನೀತಿ ಅಲ್ಲವೇ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಶಿವಮೊಗ್ಗದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕಾಯಕಲ್ಪ ನೀಡಿ ಅದಕ್ಕೆ ಮರುಜೀವ ಕೊಡುವ ಪ್ರಯತ್ನ ಮಾಡುತ್ತಿದ್ದೇನೆ. ಇದಕ್ಕೆ ಪ್ರಧಾನಿಗಳು, ಹಣಕಾಸು ಸಚಿವರ ಒಪ್ಪಿಗೆ ಬೇಕಿದೆ. ಈ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಹತ್ತು ಸಾವಿರ ಕೋಟಿ ಹಣ ಬೇಕು. ಈಗಾಗಲೇ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ನಾನೇನು ಸುಮ್ಮನೆ ಕೂತಿಲ್ಲ. ಉದ್ಯೋಗ ಸೃಷ್ಟಿ ಆಗಬೇಕು ಎನ್ನುವುದು ನನ್ನ ಉದ್ದೇಶ ಎಂದರು ಕೇಂದ್ರ ಸಚಿವರು.

ಶೀಘ್ರವೇ ಒಳ್ಳೆಯ ಸುದ್ದಿ ಕೊಡುತ್ತೇನೆ

ಪ್ರಧಾನಿಗಳ ಮಾರ್ಗದರ್ಶನದಲ್ಲಿ ನಾನು ನನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದೇನೆ. ಒಂದು ವಿಚಾರದಲ್ಲಿ ಶೀಘ್ರವೇ ಒಳ್ಳೆಯ ಸುದ್ದಿ ಕೊಡಲಿದ್ದೇನೆ. ಅದು ಯಾವುದು? ಯಾವಾಗ? ಎಂದು ಈಗಲೇ ಹೇಳಲಾರೆ. ಅದು ಯಶಸ್ವಿ ಆದರೆ ಪ್ರಧಾನಿಗಳಿಗೂ ನಂಬಿಕೆ ಬರುತ್ತದೆ. ಆಮೇಲೆ ಉಳಿದ ಕಾರ್ಖಾನೆಗಳು ಹಂತ ಹಂತವಾಗಿ ಸರಿ ಹೋಗುತ್ತವೆ. ಆ ಪ್ರಯತ್ನ ದಲ್ಲಿ ನಾನು ಇದ್ದೇನೆ. ಇನ್ನು ಕೆಲ ದಿನಗಳಲ್ಲಿ ಶುಭ ಹೇಳಲಿದ್ದೇನೆ ಎಂದು ಸಚಿವರು ಹೇಳಿದರು.

ಆದರೆ, ಆ ಶುಭ ಸುದ್ದಿ ಯಾವುದಕ್ಕೆ ಸಂಬಂಧಿಸಿದ್ದು ಎಂಬುದನ್ನು ಅವರು ಬಹಿರಂಗ ಮಾಡಲಿಲ್ಲ.

ಸುದ್ದಿಗೋಷ್ಠಿಯಲ್ಲಿ ಹೆಚ್‍ಎಂಟಿ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಪ್ರಧಾನ ವ್ಯವಸ್ಥಾಪಕ ಎಂ.ಆರ್.ವಿ ರಾಜ ಉಪಸ್ಥಿತರಿದ್ದರು.

ಬೆಂಗಳೂರಲ್ಲಿ ‘BMTC ಬಸ್’ನಿಂದ ಸರಣಿ ಅಪಘಾತ ಕೇಸ್: ಚಾಲಕ ಅಮಾನತು

ಡೋಪಿಂಗ್ ನಿಯಮ ಉಲ್ಲಂಘನೆ: ಪ್ಯಾರಾಲಿಂಪಿಯನ್ ಪ್ರಮೋದ್ ಭಗತ್ ಗೆ 18 ತಿಂಗಳು ನಿಷೇಧ

BREAKING : ನಟ ದರ್ಶನ್ ಸೇರಿದಂತೆ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆ! 

Share. Facebook Twitter LinkedIn WhatsApp Email

Related Posts

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM1 Min Read

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM2 Mins Read

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM1 Min Read
Recent News

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM
State News
KARNATAKA

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

By kannadanewsnow0913/05/2025 9:39 PM KARNATAKA 1 Min Read

ಚಿತ್ರದುರ್ಗ : ಚಳ್ಳಕೆರೆ ನಗರದ ಪಾವಗಡ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್,…

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.