ಬೆಂಗಳೂರು: ನಗರದಲ್ಲಿ ಸಾರ್ವಜನಿಕರು ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಬಂಧ ವಿಧಿಸಿಲ್ಲ ಎಂಬುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ.

ಇಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದಂತ ಡಾ.ರವಿ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಬಗ್ಗೆ ಪ್ರಾಣಿ ಪ್ರೀಯರು, ಸಾರ್ವಜನಿಕರು, ಸಮುಚ್ಛಯ ನಿವಾಸಿಗಳ ನಡುವೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಮನ್ವಯ ಸಾದಿಸುವ ದೃಷ್ಟಿಯಿಂದ, ಸಮನ್ವಯ ಕೊರತೆ ಇರುವ ಸ್ಥಳಗಳಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಜಾಗಗಳನ್ನು ಗುರುತಿಸಲಾಗುವುದು ಎಂದಿದ್ದಾರೆ.

ಗುರುತಿಸಲಾದ ನಿರ್ಧಿಷ್ಟ ಜಾಗಗಳಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಹಾಲಿ ಲಭ್ಯವಿರುವ ಮಾರ್ಗಸೂಚಿಗಳನ್ನು ಪಲಕಗಳಲ್ಲಿ ನಮೂದಿಸಿ ಪ್ರದರ್ಶಿಸುವ ಕೆಲಸಕಾರ್ಯಗಳು ಪ್ರಗತಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

ಈ ಮೇಲಿನ ಅಂಶಗಳನ್ನು ಹೊರತುಪಡಿಸಿ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಭಂದವನ್ನು ವಿಧಿಸಿರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇತ್ತೀಚೆಗೆ ಮಾದ್ಯಮಗಳಲ್ಲಿ, ಪಶುಪಾಲನಾ ವಿಭಾಗ ಬಿಬಿಎಂಪಿಯು ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ನಿರ್ಬಂಧ ವಿಧಿಸಿರುವುದಾಗಿ ಪ್ರಕಟವಾಗಿರುವ ಅಂಶಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ರವಿಕುಮಾರ್ ರವರು ಸ್ಪಷ್ಟಿಕರಣ ನೀಡಿದ್ದಾರೆ.

ನಾನು ಕಥಾನಾಯಕನಾದರೆ ಡಿಸಿಎಂ ಡಿಕೆ ಶಿವಕುಮಾರ್ ಖಳನಾಯಕ : ಮಾಜಿ ಸಿಎಂ HD ಕುಮಾರಸ್ವಾಮಿ ವಾಗ್ದಾಳಿ

ನಾನು ಕಥಾನಾಯಕನಾದರೆ ಡಿಸಿಎಂ ಡಿಕೆ ಶಿವಕುಮಾರ್ ಖಳನಾಯಕ : ಮಾಜಿ ಸಿಎಂ HD ಕುಮಾರಸ್ವಾಮಿ ವಾಗ್ದಾಳಿ

Share.
Exit mobile version