ಉಡುಪಿ : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿಲ್ಲವೆಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ನಿನ್ನೆ ಪಕ್ಷದಿಂದ ಉಚ್ಚಾಟಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿರುವವರು ನನಗೆ ಮೋದಿ ಹಾಗೂ ರಾಜ್ಯದ ನಾಯಕರಿಗೆ ಬೈದಿಲ್ಲ ಬಿಜೆಪಿ ಪಕ್ಷದ ವ್ಯವಸ್ಥೆ ಕುರಿತು ಅಸಮಾಧಾನವಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೋದಿಗೆ ಬೈದಿಲ್ಲ ರಾಜ್ಯದ ನಾಯಕರಿಗೆ ಬೈದಿಲ್ಲ, ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ನಾಯಕರನ್ನು ಟೀಕಿಸಿದ ಜಗದೀಶ್ ಶೆಟ್ಟರ್ ಮತ್ತೆ ಬಂದರು.ಪಕ್ಷಕ್ಕೆ ವಾಪಸ್ ಆಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಹೇಳಿದರು.
ಇದು ಶಾಶ್ವತವಾದ ವಜಾ ಅಲ್ಲ ಎಂದು ರಘುಪತಿ ಭಟ್ ತಿಳಿಸಿದರೂ. ಪರಿಷತ್ ಚುನಾವಣೆಯಲ್ಲಿ ಗೆದ್ದ ಮೇಲೆ ವಜಾ ರದ್ದಾಗುತ್ತದೆ.ಬಿಜೆಪಿ ಕಾರ್ಯಕರ್ತ ನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದಾರೆ.