ಶಿವಮೊಗ್ಗ : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲ ಪಕ್ಷಗಳು ಪ್ರಮುಖವಾದಂತ ಸಭೆಗಳನ್ನು ನಡೆಸುತ್ತಿದ್ದು ಅಲ್ಲದೆ ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಹಳ ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.
ಈ ಕುಡಿದಂತೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿದ್ದಂತೆ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮ ಗಿಮಿಕ್ಗಳು ನಡೆಯುವುದಿಲ್ಲ. ಈ ಕಾಲಕ್ಕೆ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರ ಗೆಲುವಿನ ಸಾಧನ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಯುವನಿಧಿ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದ ಜಾಗತಿಕ ಮಟ್ಟದಲ್ಲಿ ದೇಶದ ಸಂಸ್ಕೃತಿ ಎತ್ತಿಹಿಡಿದಿದ್ದಾರೆ. ಅವರ ಜನ್ಮದಿನದಂದು ಯುವಜನತೆಗೆ ಸ್ಫೂರ್ತಿಯಾಗಿ ರಾಜ್ಯ ಸರ್ಕಾರ ಯುವನಿಧಿ ಹೆಸರಿನಲ್ಲಿ 5ನೇ ಗ್ಯಾರಂಟಿ ಜಾರಿಗೊಳಿಸುತ್ತಿದೆ. ಪದವೀಧರರಿಗೆ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು.
ತಾಲೂಕಿನ ಜನರ ಸಂಪೂರ್ಣ ಬೆಂಬಲ ಇರುವವರೆಗೆ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಬದುಕಿರುವವರೆಗೂ ಕ್ಷೇತ್ರದ ಜನರ ರಕ್ಷಣೆ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತೇನೆ. ಜ.15ರ ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಸಾರ್ವಜನಿಕ ಸಮಸ್ಯೆಗಳನ್ನು ಅರಿತು, ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.