ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಯಾವುದೇ ರಾಜ್ಯವನ್ನು ನಿರ್ಲಕ್ಷಿಸಲಾಗಿಲ್ಲ, ಪ್ರತಿಪಕ್ಷಗಳು ದಾರಿತಪ್ಪಿಸಲು ಪ್ರಯತ್ನಿಸುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ 2024 ರ ಬಜೆಟ್ ತಾರತಮ್ಯದಿಂದ ಕೂಡಿದೆ ಎಂದು ವಿರೋಧ ಪಕ್ಷದ ಸಂಸದರ ಪ್ರತಿಭಟನೆಯ ನಡುವೆ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಬಜೆಟ್ ಯಾವುದೇ ರಾಜ್ಯವನ್ನು ನಿರ್ಲಕ್ಷಿಸಿಲ್ಲ ಮತ್ತು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು.