Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಲಿ ಲಾರಿಜಾನಿ ಹತ್ಯೆಯ ಬಳಿಕ ಇರಾನ್ ಹೊಸ ಭದ್ರತಾ ಮುಖ್ಯಸ್ಥರಾಗಿ ‘ಮೊಹಮ್ಮದ್ ಬಘರ್ ಜೊಲ್ಘಾದರ್’ ನೇಮಕ

24/03/2026 6:04 PM

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

24/03/2026 5:55 PM

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ
KARNATAKA

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

By kannadanewsnow0925/11/2025 5:24 PM

ದಾವಣಗೆರೆ: ರಾಜ್ಯಕ್ಕೆ ತಾತ್ಕಾಲಿಕ ಮುಖ್ಯಮಂತ್ರಿಗಳು ಬೇಡ; ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಮತ್ತು ಸರಕಾರ ಬೇಕೆಂಬ ಅಪೇಕ್ಷೆ ಜನರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಕ್ಕೆ ಇವತ್ತು ಚಾಲನೆ ನೀಡಿ ಅವರು ಮಾತನಾಡಿದರು. ಹಂಗಾಮಿ ಮುಖ್ಯಮಂತ್ರಿ, ತಾತ್ಕಾಲಿಕ ಮುಖ್ಯಮಂತ್ರಿ ರಾಜ್ಯಕ್ಕೆ ಬೇಕಾಗಿಲ್ಲ; ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೋ, ಇನ್ಯಾರು ಸಿಎಂ ಆಗುತ್ತಾರೋ ಎಂಬುದು ರಾಜ್ಯದ ಜನರಿಗೆ ಆಸಕ್ತಿ ಇಲ್ಲ. ಬೆಳಗಾವಿಯ ಚಳಿಗಾಲದ ಅಧಿವೇಶನ ಪ್ರಾರಂಭಕ್ಕೆ ಮುಂಚಿತವಾಗಿ ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಮತ್ತು ಸರಕಾರ ಬೇಕೆಂಬ ಅಪೇಕ್ಷೆ ಜನರದು ಎಂದು ತಿಳಿಸಿದರು.

ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ತಮ್ಮ ಸಮಸ್ಯೆಯನ್ನು ಬೆಂಗಳೂರಿನಲ್ಲೋ, ದೆಹಲಿಯಲ್ಲೇ ಬಗೆಹರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮಲ್ಲಿಕಾರ್ಜುನ ಖರ್ಗೆ ಅಸಹಾಯಕರಾಗಿ ಮಾತು..

ಪಾಪ ಮಲ್ಲಿಕಾರ್ಜುನ ಖರ್ಗೆಯವರ ಮಾತು ಕೇಳಿದರೆ ಅಯ್ಯೋ ಅನಿಸುತ್ತದೆ ಎಂದ ಅವರು, 50 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆಯವರು ಮೊನ್ನೆ ಅಸಹಾಯಕರಾಗಿ ಮಾತನಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಭವಿಷ್ಯವನ್ನು ರಾಜ್ಯದ ಜನರು ತೀರ್ಮಾನ ಮಾಡುವುದಿಲ್ಲ. ಯಾವುದೋ ವಿದೇಶದಲ್ಲಿ ಕೂತ ರಾಹುಲ್ ಗಾಂಧಿ ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಅವರು ನುಡಿದರು.

ಯಾವ ಸರಕಾರ ರೈತರ ಹಿತಾಸಕ್ತಿ ಕಾಪಾಡಲು ಸಾಧ್ಯ ಇಲ್ಲವೋ, ಅಂಥ ಸರಕಾರವನ್ನು ಕಿತ್ತೊಗೆಯುವ ಶಕ್ತಿ, ತಾಕತ್ತು ರಾಜ್ಯದ ರೈತರಿಗೆ ಇದೆ ಎಂದು ಎಚ್ಚರಿಸಿದರು. ರೈತರ ಹೋರಾಟದ ಕಿಚ್ಚು ಬೆಂಗಳೂರಿನ ವಿಧಾನಸೌಧಕ್ಕೂ ತಲುಪಲಿದೆ. ಅದಕ್ಕೂ ಮುಂಚಿತವಾಗಿ ಕಬ್ಬು ಬೆಳೆಗಾರರು, ಮೆಕ್ಕೆ ಜೋಳದ ಬೆಳಗಾರರ ಸಮಸ್ಯೆ ಇತ್ಯರ್ಥ ಪಡಿಸಿ ಎಂದು ಒತ್ತಾಯಿಸಿದರು.

ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರಾಜ್ಯದ ಹಿರಿಯ ನಾಯಕ ಸಿ.ಟಿ.ರವಿ, ಮುಖಂಡರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಸೇರಿ ಜಿಲ್ಲೆಯ ನಾಯಕರು ಭಾಗವಹಿಸಿದ್ದರು.

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ

Share. Facebook Twitter LinkedIn WhatsApp Email

Related Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

24/03/2026 5:55 PM1 Min Read

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM1 Min Read

ರಾಜ್ಯದಲ್ಲಿ ‘ಪೊಲೀಸ್ ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

24/03/2026 5:25 PM1 Min Read
Recent News

BREAKING : ಅಲಿ ಲಾರಿಜಾನಿ ಹತ್ಯೆಯ ಬಳಿಕ ಇರಾನ್ ಹೊಸ ಭದ್ರತಾ ಮುಖ್ಯಸ್ಥರಾಗಿ ‘ಮೊಹಮ್ಮದ್ ಬಘರ್ ಜೊಲ್ಘಾದರ್’ ನೇಮಕ

24/03/2026 6:04 PM

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

24/03/2026 5:55 PM

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM

ರಾಜ್ಯದಲ್ಲಿ ‘ಪೊಲೀಸ್ ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

24/03/2026 5:25 PM
State News
KARNATAKA

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

By kannadanewsnow0524/03/2026 5:55 PM KARNATAKA 1 Min Read

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು…

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM

ರಾಜ್ಯದಲ್ಲಿ ‘ಪೊಲೀಸ್ ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

24/03/2026 5:25 PM

BREAKING : ಗ್ರಾಪಂ. ಚುನಾವಣೆಗೆ ಮತ್ತೆ ವಿಳಂಬ : ಹೈಕೋರ್ಟ್ ಬಳಿ ಕಾಲಾವಕಾಶ ಕೇಳಿದ ರಾಜ್ಯ ಸರ್ಕಾರ

24/03/2026 4:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.