ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

ದಾವಣಗೆರೆ: ರಾಜ್ಯಕ್ಕೆ ತಾತ್ಕಾಲಿಕ ಮುಖ್ಯಮಂತ್ರಿಗಳು ಬೇಡ; ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಮತ್ತು ಸರಕಾರ ಬೇಕೆಂಬ ಅಪೇಕ್ಷೆ ಜನರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಕ್ಕೆ ಇವತ್ತು ಚಾಲನೆ ನೀಡಿ ಅವರು ಮಾತನಾಡಿದರು. ಹಂಗಾಮಿ ಮುಖ್ಯಮಂತ್ರಿ, ತಾತ್ಕಾಲಿಕ ಮುಖ್ಯಮಂತ್ರಿ ರಾಜ್ಯಕ್ಕೆ ಬೇಕಾಗಿಲ್ಲ; ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೋ, ಇನ್ಯಾರು ಸಿಎಂ ಆಗುತ್ತಾರೋ ಎಂಬುದು ರಾಜ್ಯದ ಜನರಿಗೆ ಆಸಕ್ತಿ ಇಲ್ಲ. ಬೆಳಗಾವಿಯ ಚಳಿಗಾಲದ ಅಧಿವೇಶನ ಪ್ರಾರಂಭಕ್ಕೆ … Continue reading ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ