ಬೆಂಗಳೂರು: ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತ್ರ, ಮೆರವಣಿಗೆಯಲ್ಲಿ ಕೊಂಡೊಯ್ದು, ಹೊಳೆ, ಕೆರೆಯಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ತೆಪ್ಪವನ್ನು ಬಳಸುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ದಿನಾಂಕ 07-09-2024ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ನಂತ್ರ ವಿವಿಧ ದಿನಾಂಕಗಳಂದು ವಿಸರ್ಜನೆಯನ್ನು ಮೆರವಮಿಗೆ ಮೂಲಕ ತೆಗೆದುಕೊಂಡು ಹೋಗಿ, ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಿದ್ದು, ಈ ಹಿಂದೆ ತೆಪ್ಪ ಮುಗುಚಿ ಹಲವೆಡೆ ಅನಾಹುತವಾಗಿದೆ ಎಂದಿದೆ.
ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮುಗುಚಿ 12 ಜನ ಸಾವನ್ನಪ್ಪಿದಂತ ಘಟನೆ ಈ ಹಿಂದೆ ನಡೆದಿತ್ತು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಣಪತಿ ವಿಸರ್ಜನೆಯ ವೇಳೆಯಲ್ಲಿ ರಾಜ್ಯಾಧ್ಯಂತ ತೆಪ್ಪ ಬಳಕೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.
ಇನ್ನೂ ಒಂದು ವೇಳೆ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ 3 ರಿಂದ 4 ಜನರಿಗೆ ಮಾತ್ರವೇ ತೆಪ್ಪದಲ್ಲಿ ಹೋಗಲು ಅವಕಾಶ ಮಾಡುವುದು. ಕಡ್ಡಾಯವಾಗಿ ಲೈಫ್ ಜಾಕೇಟ್, ನುರಿತ ಈಜುಗಾರರು ಇರುವಂತೆ ನೋಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ
BREAKING: ‘ಶಿವಮೊಗ್ಗ ಜಿಲ್ಲೆ’ಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ ಬಳಕೆ’ಗೆ ನಿಷೇಧ ಹೇರಿ ‘DC ಆದೇಶ’