ಬೆಂಗಳೂರು : ಬೆಂಗಳೂರಿಗರೇ ಗಮನಿಸಿ..ನಗರದ ಹಲವು ಕಡೆ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಜಲಮಂಡಳಿ ಪ್ರಕಟಣೆ ಹೊರಡಿಸಿದೆ.
ಎಲ್ಲೆಲ್ಲಿ ವ್ಯತ್ಯಯ..?
ಜರಗನಹಳ್ಳಿ, ಜೆ.ಪಿ.ನಗರ 4,5 6 ಮತ್ತು 7ನೇ ಹಂತ, ಬನ್ನೇರುಘಟ್ಟ ಮುಖ್ಯ ರಸ್ತೆ, ಜಯದೇವ ಆಸ್ಪತ್ರೆ, 4ನೇ ‘ಟಿ’ ಬ್ಲಾಕ್ ಪಾರ್ಟ್ ‘ಎ’, ತಿಲಕ್ ನಗರ, ವಿಜಯ ಬ್ಯಾಂಕ್ ಲೇಔಟ್, ಬಿಳೇಕಹಳ್ಳಿ, ಹೆಚ್.ಎಸ್.ಆರ್. ಲೇಔಟ್ 1 ರಿಂದ 7 ಸೆಕ್ಟರ್, ಕೋರಮಂಗಲ, ಮೈಕೋ ಲೇಔಟ್, ಎನ್.ಎಸ್.ಪಾಳ್ಯ , ಎಲೆಕ್ಟ್ರಾನಿಕ್ ಸಿಟಿ 1 ಮತ್ತು 2ನೇ ಹಂತ, 3ನೇ ಬ್ಲಾಕ್ , ಜಂಬೂಸವಾರಿ ದಿಣ್ಣೆ, ಪುಟ್ಟೇನಹಳ್ಳಿ, ಕೋಣನಕುಂಟೆ ಕ್ರಾಸ್, ಮಂಗಮ್ಮನಪಾಳ್ಯ, ಹೊಸಪಾಳ್ಯ, ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗಲಿದೆ ಎಂದು ಜಲ ಮಂಡಳಿ ಪ್ರಕಟಣೆ ಹೊರಡಿಸಿದೆ.
ಕೆಆರ್ ಪುರಂನಿಂದ ರೇಷ್ಮೆ ಸಂಸ್ಥೆಯ ಹೊರವರ್ತುಲ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ವಿವಿಧ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.