ಮಂಗಳೂರು: ಇತ್ತಿಚೇಗಷ್ಟೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ಸೃಷ್ಟಿಯಾಗಿದೆ. ಸರ್ಕಾರ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳಿಗೂ ಅನ್ವಯಿಸಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದೆ.
BIGG NEWS : ಚಂದ್ರಶೇಖರ್ ನನ್ನು ಕಿಡ್ನಾಪ್ ಮಾಡಿ, ಚಿತ್ರಹಿಂಸೆ ನೀಡಿ ಕೊಲೆ : ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ
ರಾತ್ರಿಯಿಂದ ಬೆಳಗ್ಗಿನವರೆಗೆ ನಡೆಯುತ್ತಿದ್ದ ಯಕ್ಷಗಾನ ದೇವರ ಸೇವೆಯನ್ನು ರಾತ್ರಿ 10ರ ಒಳಗೆ ಮುಗಿಸಬೇಕೆನ್ನುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ದೇವಿ ಭಕ್ತರಿಂದ ವಿರೋಧ ವ್ಯಕ್ತವಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 6 ಯಕ್ಷಗಾನ ಮೇಳಗಳಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಗೆ 2 ಶತಮಾನಗಳ ಇತಿಹಾಸವಿದೆ. ಕಷ್ಟ ಕಾರ್ಪಣ್ಯಗಳ ನಿವಾರಿಸಿದ ಸಲುವಾಗಿ ದೇವಿಗೆ ಹರಕೆಯಾಗಿ ಭಕ್ತರು ಈ ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಳ್ಳುತ್ತಾರೆ.
BIGG NEWS : ಚಂದ್ರಶೇಖರ್ ನನ್ನು ಕಿಡ್ನಾಪ್ ಮಾಡಿ, ಚಿತ್ರಹಿಂಸೆ ನೀಡಿ ಕೊಲೆ : ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ
ಅಜಾನ್ ವಿವಾದ ಶುರುವಾದ ಬಳಿಕ ಸರ್ಕಾರ ರಾತ್ರಿ 10:30ರ ನಂತರ 50 ಡೆಸಿಬಲ್ಗಿಂತ ಹೆಚ್ಚಿನ ಧ್ವನಿವರ್ಧಕ ಬಳಸದಂತೆ ಆದೇಶ ಹೊರಡಿಸಿತ್ತು. ಈ ಆದೇಶದನ್ವಯ ರಾತ್ರಿಯಿಡಿ ನಡೆಯುತ್ತಿದ್ದ ಯಕ್ಷಗಾನವನ್ನೂ ಸಂಜೆ 5 ಗಂಟೆಗೆ ಆರಂಭಿಸಿ ರಾತ್ರಿ 10ರ ಒಳಗೆ ಮುಗಿಸುವುದಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.