ಬೆಂಗಳೂರು: 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಅಧಿಕಾರಿ/ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ. ಪ್ರಸ್ತುತ 2026 ನೇ ಸಾಲಿನಲ್ಲಿ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ” ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
“ಸರ್ವೋತ್ತಮ ಸೇವಾ ಪ್ರಶಸ್ತಿ”ಯ ಎರಡು ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸಬಯಸುವವರು, ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮ ನಿರ್ದೇಶನವನ್ನು ಸಲ್ಲಿಸತಕ್ಕದ್ದು. ನಾಮನಿರ್ದೇಶನವನ್ನು ಸಲ್ಲಿಸಬಯಸುವವರು ಜಾಲತಾಣ https://dparar.karnataka.gov.in/ ಅಥವಾ https://sarvothamaawards.karnataka.gov.in ದ ಮೂಲಕ ದಿನಾಂಕ: 03-02-2026 ರಿಂದ 25-02-2026 ರೊಳಗಾಗಿ ಸಲ್ಲಿಸುವುದು. ಉಲ್ಲೇಖಿತ ಆದೇಶದ ಪ್ರತಿಗಳನ್ನು ಜಾಲತಾಣ https://dparar.karnataka.gov.in/ ರ ಸರ್ಕಾರದ ಆದೇಶಗಳು-ತರಬೇತಿ ಇಲ್ಲಿ ಅವಲೋಕಿಸಬಹುದಾಗಿದೆ.
ರಾಜ್ಯ / ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ನಾಮನಿರ್ದೇಶನವನ್ನು ಕನ್ನಡ ಅಥವಾ ಇಂಗ್ಲೀಷ್ ನಲ್ಲಿ ಸಲ್ಲಿಸಬಹುದಾಗಿದ್ದು, ಕನ್ನಡದಲ್ಲಿ ಸಲ್ಲಿಸಲು ನುಡಿ 6.0 ಆವೃತ್ತಿಯನ್ನು ಮಾತ್ರ ಬಳಸುವಂತೆ ಸೂಚಿಸಿದೆ.
ಪ್ರಶಸ್ತಿಗಳ ಸಂಖ್ಯೆ
1.ಜಿಲ್ಲಾ ಮಟ್ಟ (31 ಜಿಲ್ಲೆ X10 ಪ್ರಶಸ್ತಿ) – 310
2.ರಾಜ್ಯ ಮಟ್ಟ- 30
ಜಾಲತಾಣದಲ್ಲಿ ಮಾಹಿತಿ/ವಿವರಗಳನ್ನು ದಾಖಲಿಸಲು ಯಾವುದೇ ರೀತಿಯ ತಾಂತ್ರಿಕ ಅಡಚಣೆ ಉಂಟಾದಲ್ಲಿ pmtech.webportal@karnataka.gov.in ನಲ್ಲಿ ಸ್ಪಷ್ಟತೆ ಪಡೆಯುವುದು.









