ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಒಬ್ಬರನೇ ಒಬ್ಬ ನಾಗರೀಕರು ಮೃತಪಟ್ಟಿಲ್ಲ. ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಭಾರತ ಈ ಪ್ರತ್ಯುತ್ತರ ನೀಡಿದೆ. ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಕೊಡಿಸಲಾಗಿದೆ ಎಂಬುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಮುಗ್ಧ ಜನರನ್ನು ಕೊಂದವರನ್ನು ಮಾತ್ರ ನಾವು ಗುರಿಯಾಗಿಸಿಕೊಂಡಿದ್ದೇವೆ. ಆಪರೇಷನ್ ಸಿಂಧೂರ್ ಬಗ್ಗೆ ರಾಜನಾಥ್ ಸಿಂಗ್ ಸಂಕ್ಷಿಪ್ತ ವಿವರಣೆಯನ್ನು ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮರ್ಗದರ್ಶನದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಹನುಮಾನ್ ಜೀ ಸಂದೇಶವನ್ನು ಪಾಲಿಸಲಾಗಿದೆ. ಹನುಮಾನ್ ಅಶೋಕವನ ಧ್ವಂಸಪಡಿಸಿದಂತೆ ದಾಳಿ ನಡೆಸಲಾಗಿದೆ.