ಕೋಲಾರ: ಬಿಪಿಎಲ್ ಕಾರ್ಡ್ ದಾರರು ಪಡಿತರ ಪಡೆಯೋದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯವೆಂದೇ ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ.
ಇಂದು ಕೋಲಾರದಲ್ಲಿ ಮಾತನಾಡಿದಂತ ಅವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ನೌಕರರು ಕಾರ್ಡ್ ಪಡೆದಿದ್ದರೇ ಅಂತವರ ರೇಷನ್ ಕಾರ್ಡ್ ರದ್ದುಗೊಳಿಸಲಾಗುವುದಾಗಿ ತಿಳಿಸಿದರು.
ಅಕ್ರಮ ಪಡಿತರ ಚೀಟಿ ಪರಿಶೀಲನೆಯಿಂದಾಗಿ ರೇಷನ್ ವಿತರಣೆ ಸೇರಿದಂತೆ ವಿವಿಧ ಕೆಲಸಗಳಲ್ಲಿ ಸ್ವಲ್ಪ ಏರುಪೇರಾಗಿತ್ತು. ಈಗ ಒಂದು ಹಂತಕ್ಕೆ ಬಂದಿದೆ. ಇನ್ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದಾಗಿ ಹೇಳಿದರು.
ಬಿಪಿಎಲ್ ಕಾರ್ಡ್ ಹೊಂದಿರೋರು ಸರ್ಕಾರಿ ನೌಕರರು ಆಗಿರಬಾರದು. ವಾರ್ಷಿಕ ಆದಾಯ ಮಿತಿ 1.20 ಲಕ್ಷ ಮೀರಬಾರದು. ಇಂತವರ ಯಾವುದೇ ರೇಷನ್ ಕಾರ್ಡ್ ರದ್ದುಗೊಳಿಸುವುದಿಲ್ಲ ಎಂಬುದಾಗಿ ತಿಳಿಸಿದರು.
‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್
BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ
ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರದ ವ್ಯವಸ್ಥೆ