ಚಿಕ್ಕಬಳ್ಳಾಪುರ: ಕೋಲಾರದಲ್ಲಿ ಸಿದ್ದರಾಮಯ್ಯಗೆ ಒಳ್ಳೆಯದು ಆಗಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ: ನ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಪ್ರಕಾರ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ನನಗೀರುವ ರಾಜಕೀಯ ಅನುಭವದ ಪ್ರಕಾರ ಕೋಲಾರದಲ್ಲಿ ಸಿದ್ದರಾಮಯ್ಯಗೆ ನಿಜವಾಗಿಯೂ ಒಳ್ಳೆಯದು ಆಗಲ್ಲ. ಸಿದ್ದರಾಮಯ್ಯಗೆ ಗೆಲುವು ಬಹಳ ಕಠಿಣ ಆಗಲಿದೆ ಎಂದಿದ್ದಾರೆ.
ಶಿವಮೊಗ್ಗ: ನ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಇದೇ ವೇಳೆ ನಾನು ಸಿಎಂ ಆಗಬೇಕು ಅಂದರೆ ಕಾಂಗ್ರೆಸ್ಗೆ ವೋಟು ಮಾಡಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಅಂತ ಕಾಂಗ್ರೆಸ್ ಹೈಕಮಾಂಡ್ ಹೇಳಲಿ, ಇಲ್ಲ ಮಲ್ಲಿಕಾರ್ಜುನ ಖರ್ಗೆಯವರು ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಅಂತ ಹೇಳಲಿ. ಸ್ವಯಂ ಘೋಷಿತವಾಗಿ ಸಿದ್ದರಾಮಯ್ಯ ಘೋಷಣೆ ಮಾಡಿಕೊಂಡರೆ ಆಗಲ್ಲ. ಪಕ್ಷ ಘೋಷಣೆ ಮಾಡದೇ ಹೊರತು ಸ್ವಯಂಘೋಷಣೆಗೆ ಮಾನ್ಯತೆ ಇಲ್ಲ ಎಂದು ಹೇಳಿದ್ದಾರೆ.