ಹುಬ್ಬಳ್ಳಿ: ಶಾಸಕ ಬಸನಗೌಡ ಪಾಲೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೊಸ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ. ಅದಕ್ಕಿಂತ ಹಿಂದೂಗಳ ಮತ ವಿಭಜನೆ ಆಗಬಾರದು ಎಂಬುದು ನನ್ನ ಉದ್ದೇಶವಾಗಿದೆ ಎಂದರು.
ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ನಾನು ಅಲ್ಲ ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗೋದಿಲ್ಲ ಎಂಬುದಾಗಿ ತಿಳಿಸಿದರು.