ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಿಂದೂ ಸಮಾಜದ ಬಹುದಿನದ ಕನಸು ನನಸಾಗುತ್ತಿದೆ. ಆದರೆ ರಾಷ್ಟ್ರದ್ರೋಹಿ ಪಿಎಫ್ಐ ಸಂಘಟನೆಯ ಕುತಂತ್ರ ಬೆಳಕಿಗೆ ಬಂದಿದೆ.
‘ಸಿದ್ದರಾಮಯ್ಯ ಚುನಾವಣೆಗೆ ಎಲ್ಲೇ ಸ್ಪರ್ಧಿಸಿದರೂ ಗೆಲ್ಲಲ್ಲ ಬಿಡಿ’ : ಈಶ್ವರಪ್ಪ ಲೇವಡಿ
ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ರಾಮ ಮಂದಿರವನ್ನು ಪಿಎಫ್ಐ ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸ್ಫೋಟಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಮ ಮಂದಿರ ಸ್ಫೋಟ ವಿಷಯವನ್ನು ಪಿಎಫ್ಐನವರು ಕನಸಿನಲ್ಲೂ ನೆನಪು ಮಾಡಿಕೊಳ್ಳುವುದು ಬೇಡ. ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಗೌರವ, ನಂಬಿಕೆ ಇರುವ ಪ್ರತಿಯೊಬ್ಬರೂ ಪಿಎಫ್ಐ ಹೇಳಿಕೆಯನ್ನು ಖಂಡಿಸಬೇಕು.
‘ಸಿದ್ದರಾಮಯ್ಯ ಚುನಾವಣೆಗೆ ಎಲ್ಲೇ ಸ್ಪರ್ಧಿಸಿದರೂ ಗೆಲ್ಲಲ್ಲ ಬಿಡಿ’ : ಈಶ್ವರಪ್ಪ ಲೇವಡಿ
ಅಯೋಧ್ಯೆ ರಾಮ ಜನಿಸಿದ ಸ್ಥಳ. ಹೀಗಾಗಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಬಹಳ ವೇಗವಾಗಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ದೇಶದ್ರೋಹಿಗಳು ಸ್ಫೋಟಕ್ಕೆ ಸಂಚು ರೂಪಿಸಿದ್ದ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.