ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆ ದಿನ. ಆದರೆ ಶುಲ್ಕ ಪಾವತಿಸಲು ಮೇ 22 ರ ಇಂದು ಕೊನೆಯ ದಿನವಾಗಿದೆ.
ಹುದ್ದೆ ಹೆಸರು : ಗ್ರಾಮ ಆಡಳಿತ ಅಧಿಕಾರಿ (VA – ಗ್ರಾಮ ಲೆಕ್ಕಿಗ)
ಹುದ್ದೆಗಳ ಸಂಖ್ಯೆ : 1000
ವೇತನ ಶ್ರೇಣಿ : Rs.21400-42000.
ಪಿಂಚಣಿ ಸೌಲಭ್ಯ : ಪಿಂಚಣಿ ರಹಿತ (ಎನ್‌ಪಿಎಸ್).
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ ವಿವರಗಳು
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು. ಅಥವಾ
ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ / ಎನ್‌ಐಓಎಸ್ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಪಡೆದಿರಬೇಕು. ಅಥವಾ
ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಯಸ್ಸಿನ ಅರ್ಹತೆಗಳು ಹೀಗಿವೆ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.