ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುನ್ನ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವುದು.
ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹ ಬಳಸುವುದು.
ಈ ಬಗ್ಗೆ ನಗರಸಭೆಯಿಂದ ಅನುಮತಿ ಪಡೆಯುವ ಮುನ್ನ ರೂ.100 ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆಯನ್ನು ಸಲ್ಲಿಸುವುದು ಸರ್ಕಾರದ ಆದೇಶದ ಪ್ರಕಾರ ಕಡ್ಡಾಯವಾಗಿದೆ. ಇಲ್ಲವಾದಲ್ಲಿ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಆ)ರ ಪ್ರಕಾರ ರೂ.10 ಸಾವಿರ ವರೆಗೂ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲುವಾಸ ವಿಧಿಸುವುದಾಗಿದೆ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರತಿಷ್ಠಾಪಿಸಿ ಕಾರ್ಯಕ್ರಮಆಯೋಜಿಸುವುದು.
ನಗರಸಭೆ ವತಿಯಿಂದ ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಈ ಸ್ಥಳದಲ್ಲೆ ವಿಗ್ರಹಗಳನ್ನು ಹೂವು ಹಣ್ಣುಗಳನ್ನು ಪ್ರತ್ಯೇಕಿಸಿ ವಿಸರ್ಜಿಸಲು ತಿಳಿಯಪಡಿಸಿದೆ. ಒಂದು ವೇಳೆ ಉಲ್ಲಂಘಿಸಿದಲ್ಲಿ ಕಾನೂನಿನಂತೆ ಕ್ರಮಕೈಗೊಳ್ಳಲಾಗುತ್ತದೆ. ವಿ.ಸೂ:ಕೊನೆ ಹಂತದ ದಾವಂತ ತಪ್ಪಿಸಲು ಈಗಾಗಲೇ ಅನುಮತಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ.