ಬೆಂಗಳೂರು: ಸರ್ಕಾರಿ ಕೋಟಾದಡಿಯಲ್ಲಿ D.El.Ed, D.P.Ed ಹಾಗೂ D.P.S.E ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನಯನ್ನು ಆಹ್ವಾನಿಸಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಮಾಹಿತಿ ನೀಡಿದ್ದು,2024-25ನೇ ಸಾಲಿನ D.El.Ed, D.P.Ed & D.P.S.E ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನ ದಿನಾಂಕ:06/05/2024 ರಿಂದ 05/06/2024ರ ವರೆಗೆ ಆಹ್ವಾನಿಸಲಾಗಿದೆ ಎಂದಿದೆ.
ಇಲಾಖಾ ವೆಬ್ ಸೈಟ್ www.schooleducation.karnataka.gov.in ನಲ್ಲಿ ಪ್ರಕಟಿಸಲಾದ ಮಾರ್ಗಸೂಚಿಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಇದರೊಂದಿಗೆ ಜಿಲ್ಲಾವಾರು D.EL.Ed, D.P.Ed & D.P.S.E ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಓದಿ ಅರ್ಥೈಸಿಕೊಂಡು ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿಮಾಡಿ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಕೇಂದ್ರ (ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ-DIET) ಗಳಲ್ಲಿ ಸಲ್ಲಿಸುವಂತೆ ಮನವಿ ಮಾಡಿದೆ.
Teacher Jobs: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ