ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ (ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕನಿಷ್ಠ 10 ಸದಸ್ಯರು), ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಬೆಂಗಳೂರು ನಗರ ಜಿಲ್ಲೆಯ ಭೋವಿ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮುಖಾಂತರ ಅರ್ಜಿಗಳನ್ನು ಅಕ್ಟೋಬರ್ 10 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ‍್ಥಾಪಕರುಗಳ ಕಛೇರಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ನಂ.29/19 ರಾಜಿನಗರ 1ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್ ಹತ್ತಿರ, ಬೆಂಗಳೂರು-560 010 ಅಥವಾ ದೂರವಾಣಿ ಸಂಖ್ಯೆ: 080-23421533 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ‍್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.