ದಾವಣಗೆರೆ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ ಸಂಸ್ಥೆಯಿಂದ ಪ.ಪಂಗಡದವರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಏ.17 ರಿಂದ 26 ರವರೆಗೆ ದಾವಣಗೆರೆಯ ಡಿ.ಆರ್.ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ನೀಡಲಾಗುತ್ತಿದೆ.
18 ರಿಂದ 55 ವರ್ಷವಯೋಮಾನ, 10ನೇ ತರಗತಿ ಪಾಸಾಗಿರಬೇಕು. ಅಭ್ಯರ್ಥಿಗಳು ಪಾಸ್‍ಪೋರ್ಟ್ ಅಳತೆಯ 2 ಪೋಟೋ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ-577006, ತರಬೇತುದಾರಾದ ಬಸವರಾಜ ಜಿ. ಬಿ. ಮೊ.ಸಂ: 9164742033, ಉಮೇಶ್ ಹೆಚ್.ಎಲ್. ಮೊ.ಸಂ: 9741743346 ಇವರನ್ನು ಸಂಪರ್ಕಿಸಲು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮ್ಯಾಚ್ ಫಿಕ್ಸಿಂಗ್ ಇಲ್ಲದೇ ‘400 ಸೀಟು’ ಗೆಲ್ಲಲು ಸಾಧ್ಯವಿಲ್ಲ: ‘ಮೋದಿ’ ವಿರುದ್ಧ ಘರ್ಜಿಸಿದ ‘ರಾಹುಲ್ ಗಾಂಧಿ’
ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ