ಬೆಂಗಳೂರು: ಸೇನೆಯಲ್ಲಿ ನೇಮಕಾತಿ ಪಡೆಯಲು, ಆಕಾಂಕ್ಷೆ ಹೊಂದಿರುವಂತ ಅಭ್ಯರ್ಥಿಗಳಿಗೆ ಪೂರ್ವಭಾವಿ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತೀಯ ಸೇನೆಗಳಿಗೆ ಸೇರ ಬಯಸುವ, ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಮತ್ತು ವೃತ್ತಿ ಮಾರ್ಗದರ್ಶನ ಬಗ್ಗೆ ಪೂರ್ವಭಾವಿ ತರಬೇತಿಯನ್ನು ನೀಡಲಾಗುತ್ತದೆ ಎಂದಿದೆ.
ಸೇನೆಗೆ ಸೇರ ಬಯಸಿ ಪೂರ್ವಭಾವಿ ತರಬೇತಿ ನಿರೀಕ್ಷೆಯಲ್ಲಿರುವಂತವರು https://dom.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ 8277799990ಗೆ ಕರೆ ಮಾಡಿ ಪಡೆಯಬಹುದಾಗಿದೆ.