ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 18 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೇ- 09 ರಿಂದ ಮೇ- 21 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ಮೊ.ಸಂ.: 9482762350 ನ್ನು ಸಂಪರ್ಕಿಸುವುದು.
ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು?: ಬಸವರಾಜ ಬೊಮ್ಮಾಯಿ ಪ್ರಶ್ನೆ
BREAKING : ‘ಬಾರ್ ಅಸೋಸಿಯೇಷನ್’ಗಳಲ್ಲಿ 3ನೇ ಒಂದು ಭಾಗದಷ್ಟು ‘ಮಹಿಳಾ ಕೋಟಾ’ ಜಾರಿಗೆ ಸುಪ್ರೀಂಕೋರ್ಟ್ ಆದೇಶ