ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಕರೆಯಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ದಿನಾಂಕ 04-04-2024 ರಿಂದ 03-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತವಾಗಿ ಮೊಬೈರ್ ಪೋನ್ ರಿಪೇರಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.
ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ.
ವಾಟ್ಸಾಪ್ ಮೂಲಕವೂ ಈ ತರಬೇತಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅದರ ಸಂಖ್ಯೆ 6364561982 ಆಗಿರುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದಾದರೇ www.rudsetitraining.org ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08256236404, 9591044014, 9448348569, 9448484237, 9980885900ಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.
ರಾಜ್ಯದಲ್ಲಿ ‘ಆಸ್ತಿ ನೋಂದಣಿ’ ಮತ್ತಷ್ಟು ಸುಲಭ: ರಾಜ್ಯಾಧ್ಯಂತ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ
ಕೇಂದ್ರದ ‘ಅನುದಾನ’ ತಾರತಮ್ಯದಿಂದ ರಾಜ್ಯಕ್ಕೆ ‘ಆರ್ಥಿಕ ಸವಾಲು’ಗಳು ಎದುರಾಗಿವೆ : ಕೃಷ್ಣ ಭೈರೇಗೌಡ ಆಕ್ರೋಶ
ಬೆಂಗಳೂರಲ್ಲಿ ‘ಕಿಲ್ಲರ್ BMTC’ಗೆ ಮತ್ತೊಂದು ಬಲಿ: ರಸ್ತೆದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು