ಶಿವಮೊಗ್ಗ : 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು.
2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ.
ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು. ಆದಾರ ಪ್ರಮಾಣದೊಂದಿಗೆ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ