ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜನವರಿ 30 ಮತ್ತು 31 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್‍ಕಾರ್ಡ್ ಜೆರಾಕ್ಸ್, 2 ಪಾಸ್ ಪೋಟೋ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿ ಚಂದ್ರಶೇಖರ್ ಸುಂಕದ್ ತಿಳಿಸಿದ್ದಾರೆ.
‘ಕಿಡ್ನಿ ವೈಫಲ್ಯ’ದಿಂದ ಬಳಲುತ್ತಿರುವ ಬಡವರಿಗೆ ಗುಡ್ ನ್ಯೂಸ್: ರಾಜ್ಯಧ್ಯಂತ ‘ಉಚಿತ ಡಯಾಲಿಸಿಸ್ ಕೇಂದ್ರ’ಗಳು ಕಾರ್ಯಾರಂಭ
Covid19 Update: ರಾಜ್ಯದಲ್ಲಿಂದ 103 ಜನರಿಗೆ ಕೊರೋನಾ, 134 ಮಂದಿ ಗುಣಮುಖ