ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಹ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15 ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಈ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತು 3ಬಿಗೆ ಸೇರಿದವರಾಗಿರಬೇಕು(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತ ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-, ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿರಬೇಕು. 18 ರಿಂದ 55 ವಯೋಮಿತಿಯೊಳಗಿನವರು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಸೌಲಭ್ಯ ಪಡೆಯಲು ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಖುಷ್ಕಿ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ವರಮಾನ ರೂ.98,000/-, ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿದ್ದು ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊಂಡಿರುವಂತೆ ಕನಿಷ್ಟ 01 ಎಕರೆ ಜಮೀನು ಇದ್ದು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜನವರಿ 17 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ www.dbcdc.karnataka.gov.in, ಸಹಾಯವಾಣಿ ಸಂಖ್ಯೆ: 080-22374832, 805077000476, 7090400100 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಶಿವಮೊಗ್ಗ: ಸಾಗರದಲ್ಲಿ ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
BIGG NEWS: ರಾಯಚೂರಿನಲ್ಲಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶಿಸಿದ ಗಾಲಿ ಜನಾರ್ದನ ರೆಡ್ಡಿ