ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ 6 ನೇ ಕಂತಿನ ಹಣ ಬಿಡುಗಡೆಗೂ ಮುನ್ನ ಹೊಸ ರೂಲ್ಸ್ ಜಾರಿಯಾಗಿದ್ದು, ಒಂದು ವೇಳೆ ನೀವು ಇದನ್ನು ಅನುಸರಣೆ ಮಾಡದೇ ಹೋದಲಿ ನಿಮಗೆ ಹಣ ಬರುವುದಿಲ್ಲ. ಹೌದು, ಸದ್ಯ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಮಾಸಿಕ 2000 ರೂ ಹಣ ಪಡೆಯಲು ಹೊಸ ನಿಯಮವನ್ನು ರೂಪಿಸಿದೆ. ಗೃಹ ಲಕ್ಷ್ಮಿ ಪಾಲನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
ನಿಮ್ಮ ಹತ್ತಿರದ ಬ್ಯಾಂಕ್ ಗೆ ಭೇಟಿ ನೀಡುವ ಮೂಲಕ NPCI ಅನ್ನು ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ. ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಪಡೆಯಲು NPCI ಕಡ್ಡಾಯವಾಗಿದೆ. NPCI ಆಗದಿದ್ದರೆ 6 ನೇ ಕಂತಿನ ಹಣ ಜಮಾ ಆಗುವುದಿಲ್ಲ ಎನ್ನಲಾಗಿದೆ.