ಶಿವಮೊಗ್ಗ : ಕರ್ನಾಟಕ ಸರ್ಕಾರದ ‘ಅಮೃತ ಜ್ಯೋತಿ’ ಯೋಜನೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ದಿನಾಂಕ:01-05-2022 ರಿಂದ ಅನ್ವಯವಾಗುವಂತೆ ಮಾಸಿಕ 75 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು.
ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹ ಗ್ರಾಹಕರು ಸುವಿಧ ಪೋರ್ಟಲ್ನಲ್ಲಿ ನೋಂದಣಿ ಮಾಡಬೇಕಾಗಿದ್ದು, ಗ್ರಾಹಕರು ಸ್ವಯಂ ಸುವಿಧ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಅಥವಾ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡ್ನಲ್ಲಿ ನೋಂದಣಿಯಾಗಿರುವ ಮೊಬೈಲ್ನೊಂದಿಗೆ ಸಮೀಪದ ಮೆಸ್ಕಾಂಕ ಉಪವಿಭಾಗ/ಕಾರ್ಯ ಮತ್ತು ಪಾಲನಾ ಶಾಖೆಯನ್ನು ಭೇಟಿ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದ್ದು ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.