ಬೆಂಗಳೂರು: ಇಂಧಾನ ಇಲಾಖೆಯ ವೆಬ್ ಸೈಟ್ ಸಾಫ್ಟ್ ವೇರ್ ಅಪ್ ಡೇಟ್ ಕಾರಣದಿಂದಾಗಿ ಮಾರ್ಚ್.10ರ ನಾಳೆಯಿಂದ ಮಾ. 19ರವರೆಗೆ 10 ದಿನಗಳ ಕಾಲ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಲ್ ಸೇರಿದಂತೆ ಇತರೆ ಸೇವೆಗಳು ಸ್ಥಗತಗೊಳಿಸಲಾಗುತ್ತಿದೆ.
ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಗಳು ಹತ್ತು ದಿನಗಳ ಕಾಲ ಸೇವೆಗಳು ಲಭ್ಯವಿರುವುದಿಲ್ಲ. ಮಾರ್ಚ್.10ರ ನಾಳೆಯಿಂದ ಮಾ. 19ರವರೆಗೆ ಹತ್ತು ದಿನಗಳ ಕಾಲ ಲಭ್ಯವಿರುವುದಿಲ್ಲ ಎಂದಿದೆ.
ತಂತ್ರಾಂಶವು ಕಾರ್ಯಾರಂಭಗೊಂಡ ನಂತ್ರ ಪರೀಕ್ಷೆಯ ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಮಾರ್ಚ್.20ರ ನಂತ್ರ ಈ ಆನ್ ಲೈನ್ ಸೇವೆ ಸರಿಯಾಗಲಿದ್ದು, ಗ್ರಾಹಕರು ವಿದ್ಯುತ್ ಪಾವತಿ ಮಾಡದೇ ಇದ್ದರೂ ಸಂಪರ್ಕ ಕಡಿತಗೊಳಿಸೋದಿಲ್ಲ ಅಂತ ಎಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದೆ.
ನಾಳೆಯಿಂದ ಈ ಎಲ್ಲಾ ಜಿಲ್ಲೆಗಳ ಎಸ್ಕಾಂ ಸೇವೆಯಲ್ಲಿ ವ್ಯತ್ಯಯ
ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.
ಸೆಸ್ಕ್: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.
ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
ಜೆಸ್ಕಾಂ: ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.