ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸುವ ಪ್ರಕ್ರಿಯೆ (ಜುಲೈ 1 ರಿಂದ) ಜಾರಿಗೆ ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ.

ನೋಂದಣಿ ಹೇಗೆ?

* 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ

* 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ ₹2 ಶುಲ್ಕ

* 30 ದಿನಗಳ ಬಳಿಕ ಒಂದು ವರ್ಷದೊಳಗಾದರೆ ತಹಶೀಲ್ದಾರರ ಪತ್ರ ಲಗತ್ತಿನ ಜೊತೆ ₹5 ಶುಲ್ಕ

* 1 ವರ್ಷ ನಂತರವಾದರೆ ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾಪ್ರಾಂತ ದಂಡಾಧಿಕಾರಿ ಆದೇಶ ಪತ್ರ ಲಗತ್ತು 10 ಶುಲ್ಕ

Share.
Exit mobile version