ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2,000 ರೂ. ಖಾತೆಗೆ ಜಮಾ ಆಗದ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ಮುಖ್ಯ ದಾಖಲೆಗಳನ್ನು ಸರಿಪಡಿಸಿದ್ರೆ ನಿಮ್ಮ ಖಾತೆಗೂ ಹಣ ಬರಲಿದೆ.
ಹೌದು, ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ.
ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ರೂ ಈವರೆಗೆ ಹಣ ಬಾರದಿದ್ದರೆ ತಕ್ಷಣವೇ ನಿಮ್ಮ ದಾಖಲೆಗಳಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಆಗದೇ ಇದ್ರೆ, ಇಲ್ಲಾ ಆಧಾರ್ ಸೀಡಿಂಗ್ ಮಾಡಿಸದೇ ಇದ್ರೆ ಕೂಡಲೇ ಈ ಕೆಲಸವನ್ನು ಮಾಡಿಸಿಕೊಳ್ಳಿ.
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ದೋಷಗಳಿದ್ದಲ್ಲಿ, ಕೂಡಲೇ ಬ್ಯಾಂಕ್‌ನಲ್ಲಿ ಹೊಸದಾಗಿ ಖಾತೆಯನ್ನು ತೆರೆಯುವ ಮೂಲಕ ಆ ಬ್ಯಾಂಕ್ ಖಾತೆಯನ್ನು ಗೃಹಲಕ್ಷ್ಮೀ ಯೋಜನೆಗೆ ಲಿಂಕ್ ಮಾಡಿದ್ರೆ ನೀವು ಬಾಕಿ ಉಳಿದಿರುವ ಎಲ್ಲಾ ಮೊತ್ತ ನಿಮ್ಮ ಹೊಸ ಖಾತೆಗೆ ಜಮಾ ಅಗಲಿದೆ.