ಬೆಂಗಳೂರು : ಬಿಬಿಎಂಪಿ ಕಲ್ಯಾಣ ವಿಭಾಗದಿಂದ ಒಂಟಿ ಮನೆ, ವಿದ್ಯಾರ್ಥಿಗಳಿಗ ಲ್ಯಾಪ್ ಟ್ಯಾಪ್ ಗೆ ಸೇರಿ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಅ.19 ರವರೆಗೆ ವಿಸ್ತರಿಸಲಾಗಿದೆ.

ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರ ಗಮನಕ್ಕೆ: ಅ.1 ರಿಂದ ಬದಲಾಗಲಿವೆ ಈ ನಿಯಮಗಳು | New rules for debit, credit card

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 19-09-2022 ರನ್ನು ಕೊನೆ ದಿನಾಂಕವಾಗಿ ನಿಗಧಿಪಡಿಸಿರುವುದನ್ನು ಮುಂದುವರೆಸಿ ದಿನಾಂಕ: 19-10-2022ರವರೆಗೆ ವಿಸ್ತರಿಸಿದೆ.

  1. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ರೂ .5.00 ಲಕ್ಷಗಳ ಸಹಾಯಧನ
  2. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್‌ಟಾಪ್.
  3. ಅಂಧರಿಗೆ ಸ್ಮಾರ್ಟ್ ಸ್ಟಿಕ್.
  4. ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್‌ಟಾಪ್.
  5. ಹಿರಿಯ ನಾಗರೀಕರಿಗೆ ಮಡಚುಬಹುದಾದ ವೀಲ್ ಚೇರ್.

ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ರೂ. 30/- ಶುಲ್ಕವನ್ನು ಪಾವತಿಸಿ ಆನ್‌ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

Share.
Exit mobile version