ಶಿವಮೊಗ್ಗ : ಮೇ.6ರವರೆಗೆ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಹ ಮತದಾರರು ತಮ್ಮ ಹೆಸರು ಸೇರ್ಪಡೆ ಮಾಡೋದಕ್ಕೆ ಅವಕಾಶ ನೀಡಲಾಗಿದೆ.
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಸಿದ್ದಲಿಂಗರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ