ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ತುಮಕೂರು ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲೂ ಜನ ಶತಾಬ್ದಿ ರೈಲು ನಿಲುಗಡೆ ಮಾಡಲಾಗುತ್ತಿದೆ.
ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ಹಂಚಿಕೊಂಡಿದ್ದು, ಹುಬ್ಬಳ್ಳಿ-ಬೆಂಗಳೂರು, ಶಿವಮೊಗ್ಗ-ಬೆಂಗಳೂರು ಮಾರ್ಗವಾಗಿ ತೆರಳುವಂತ ಜನ ಶತಾಬ್ದಿ ರೈಲನ್ನು ತುಮಕೂರಿನ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31, 2024 ರಿಂದ ನವೆಂಬರ್ 2, 2024 ರ ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.
ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಾದ ಬೆಳಗಾವಿಯಿಂದ ಮೀರಜ್, ಬೆಂಗಳೂರಿನಿಂದ ಬೆಳಗಾವಿ, ಮೈಸೂರಿನಿಂದ ವಿಜಯಪುರದವರೆಗೆ ಹಾಗೂ ವಿಸ್ತರಿತ ರೈಲ್ವೆ ಮಾರ್ಗ ಹುಬ್ಬಳ್ಳಿಯಿಂದ ರಾಮೇಶ್ವರಂ ಹಾಗೂ ಋಷಿಕೇಶದಿಂದ ಹುಬ್ಬಳ್ಳಿವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ.
ಪ್ರಯಾಣಿಕರಿಗೆ ಉತ್ತಮ ಸಂಚಾರದ ವ್ಯವಸ್ಥೆ ಕಲ್ಪಿಸಲು ಭಾರತೀಯ ರೈಲ್ವೆ ಒಟ್ಟು 34 ವಿಶೇಷ ರೈಲುಗಳ ವ್ಯವಸ್ಥೆಮಾಡಿದೆ. ಸಾರ್ವಜನಿಕರು ಈ ವಿಶೇಷ ರೈಲುಗಳ ಸೌಲಭ್ಯ ಪಡೆದುಕೊಳ್ಳಿ, ನಿಮ್ಮ ಹಬ್ಬದ ಸಂಭ್ರಮ ಇಮ್ಮಡಿಯಾಗಲಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ವಿಶೇಷ ರೈಲುಗಳ ಸಂಚಾರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31, 2024 ರಿಂದ ನವೆಂಬರ್ 2, 2024 ರ ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.
ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಾದ ಬೆಳಗಾವಿಯಿಂದ ಮೀರಜ್,… pic.twitter.com/hDu6gL0oMl
— V. Somanna (@VSOMANNA_BJP) October 17, 2024
ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: ಕರೆ ಮಾಡಿದವರನ್ನು ವಿಮಾನ ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ
BIG NEWS: ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ವಿಚಾರ: ನಾಳೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ